ದೇಶ

ರಾಜಕೀಯ ಮಾಡುವ ಸಮಯ ಇದಲ್ಲ: ಪ್ರತಿಪಕ್ಷಗಳ ಟೀಕೆಗೆ ರೈಲ್ವೆ ಸಚಿವ ತಿರುಗೇಟು

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಸೋಮವಾರ ಮಧ್ಯಾಹ್ನ ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ನಿಲ್ದಾಣದ ಬಳಿಯ ರಂಗಪಾಣಿಯಲ್ಲಿ ರೈಲು ಡಿಕ್ಕಿ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿದರು.

ರಾಜಕೀಯ ಮಾಡುವ ಸಮಯ ಇದಲ್ಲ: ಪ್ರತಿಪಕ್ಷಗಳ ಟೀಕೆಗೆ ರೈಲ್ವೆ ಸಚಿವ ತಿರುಗೇಟು
ಅಶ್ವಿನಿ ವೈಷ್ಣವ್
Published On :

ನ್ಯೂ ಜಲ್ಪೈಗುರಿ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಸೋಮವಾರ ಮಧ್ಯಾಹ್ನ ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ನಿಲ್ದಾಣದ ಬಳಿಯ ರಂಗಪಾಣಿಯಲ್ಲಿ ರೈಲು ಡಿಕ್ಕಿ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿಯನ್ನು ಪರಿಶೀಲಿಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವೈಷ್ಣವ್, ಅಪಘಾತಕ್ಕೆ ಕಾರಣವೇನು ಎಂಬುದರ ಕುರಿತು ಸಮಗ್ರ ತನಿಖೆ ನಡೆಸುವುದಾಗಿ ಭರವಸೆ ನೀಡಿದರು.

"ರಕ್ಷಣಾ ಕಾರ್ಯಾಚರಣೆ ಮುಗಿದಿದೆ. ಈಗ ಪುನಃಸ್ಥಾಪನೆಯತ್ತ ನಮ್ಮ ಗಮನ. ರಾಜಕೀಯ ಮಾಡುವುದಕ್ಕೆ ಇದು ಸಮಯವಲ್ಲ" ಎಂದು ಪ್ರತಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದರು.

ಈಶಾನ್ಯ ಫ್ರಾಂಟಿಯರ್ ರೈಲ್ವೇ (ಎನ್‌ಎಫ್‌ಆರ್) ಅಧಿಕಾರಿಯ ಪ್ರಕಾರ, ಇಂದು ಬೆಳಗ್ಗೆ ರಂಗಪಾಣಿ ನಿಲ್ದಾಣದ ಬಳಿ ಸೀಲ್ದಾಹ್‌ಗೆ ಹೋಗುವ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್ ರೈಲು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 9 ಪ್ರಯಾಣಿಕರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.