ದೇಶ

ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರದ ಪ್ರತೀಕ 'ಸೂರ್ಯ ಘರ್ 'ಯೋಜನೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರ ಪ್ರಧಾನಿ ಆಶಯವಾಗಿದ್ದು, ಸೂರ್ಯ ಘರ್ ಯೋಜನೆ ಇದಕ್ಕೆ ಪ್ರತೀಕವಾಗಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರದ ಪ್ರತೀಕ 'ಸೂರ್ಯ ಘರ್ 'ಯೋಜನೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
Published On :

ನವದೆಹಲಿ: ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರ ಪ್ರಧಾನಿ ಆಶಯವಾಗಿದ್ದು, ಸೂರ್ಯ ಘರ್ ಯೋಜನೆ ಇದಕ್ಕೆ ಪ್ರತೀಕವಾಗಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ನವದೆಹಲಿಯಲ್ಲಿ ಮಂಗಳವಾರ ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆ ಕಾರ್ಯದರ್ಶಿ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಮಗ್ರ ಪರಿಶೀಲನೆ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಈ ನೂತನ ಸೂರ್ಯ ಘರ್ ಯೋಜನೆಯಡಿ ದೇಶಾದ್ಯಂತ 1 ಕೋಟಿ ಗ್ರಾಹಕರು 300 ಯೂನಿಟ್ ಉಚಿತ ವಿದ್ಯುತ್ ಪಡೆಯಲು ಅವಕಾಶವಿದೆ ಎಂದು ತಿಳಿಸಿದರು.

ದೇಶದ ನಾನಾ ರಾಜ್ಯಗಳು, ವಿತರಕ ಘಟಕಗಳು ಮತ್ತು ನಾಗರಿಕರು ಈ ಯೋಜನೆಯ ಸಂಪೂರ್ಣ ಪ್ರಯೋಜನ ಪಡೆದುಕೊಳ್ಳುವಂತೆ ಪ್ರೇರೇಪಿಸಬೇಕು ಎಂದು ಈ ಮಹತ್ವದ ಸಭೆಯಲ್ಲಿ ಸಚಿವ ಜೋಶಿ ಮಾರ್ಗದರ್ಶನ ನೀಡಿದರು.

ಸೂರ್ಯ ಘರ್ ಮೂಲಕ ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರ ಸಾಧಿಸುವುದು ಭಾರತದ ಆಶಯವಾಗಿದ್ದು, ಇದು ಹಸಿರು ಹಾಗೂ ಹೆಚ್ಚು ಸುಸ್ಥಿರ ಭವಿಷ್ಯಕ್ಕೆ ಸುಗಮ ದಾರಿಯಾಗಲಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಅಭಿಪ್ರಾಯಪಟ್ಟರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.