ದೇಶ

ಒಡಿಶಾ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ನವೀನ್ ಪಟ್ನಾಯಕ್ ಆಯ್ಕೆ

ಒಡಿಶಾ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ನನ್ನನ್ನು ಆಯ್ಕೆ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಬುಧವಾರ ಹೇಳಿದ್ದಾರೆ.

ಒಡಿಶಾ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ನವೀನ್ ಪಟ್ನಾಯಕ್ ಆಯ್ಕೆ
ನವೀನ್ ಪಟ್ನಾಯಕ್
Published On :

ಭುವನೇಶ್ವರ: ಒಡಿಶಾ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ನನ್ನನ್ನು ಆಯ್ಕೆ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಬುಧವಾರ ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಪಟ್ನಾಯಕ್, ಬಿಜೆಡಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. "ನಾವು ಬಿಜೆಡಿ ಶಾಸಕರ ಸಭೆ ನಡೆಸಿದ್ದೇವೆ. ಶಾಸಕರು ನನ್ನನ್ನು ವಿರೋಧ ಪಕ್ಷದ ನಾಯಕ ಮತ್ತು ಬಿಜೆಡಿ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಿದ್ದಾರೆ. ನಾನು ಅವರಿಗೆ ಅಭಿನಂದನೆ ಸಲ್ಲಿಸಿದ್ದೇನೆ" ಎಂದರು.

ಹಿರಿಯ ಶಾಸಕ ಪ್ರಸನ್ನ ಆಚಾರ್ಯ ಅವರನ್ನು ಪ್ರತಿಪಕ್ಷದ ಉಪನಾಯಕರನ್ನಾಗಿ ಮತ್ತು ಮಾಜಿ ಸ್ಪೀಕರ್ ಪ್ರಮೀಳಾ ಮಲ್ಲಿಕ್ ಅವರನ್ನು ಸದನದಲ್ಲಿ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ನೇಮಕ ಮಾಡಲಾಗಿದೆ ಎಂದು ಪಟ್ನಾಯಕ್ ತಿಳಿಸಿದ್ದಾರೆ.

ಪ್ರತಾಪ್ ಕೇಶರಿ ದೇಬ್ ಅವರನ್ನು ವಿಧಾನಸಭೆಯ ವಿರೋಧ ಪಕ್ಷದ ಉಪ ಮುಖ್ಯ ಸಚೇತಕರನ್ನಾಗಿ ನೇಮಿಸಲಾಗಿದೆ.

ರಾಜ್ಯದಲ್ಲಿ 24 ವರ್ಷಗಳ ಕಾಲ ಆಡಳಿತ ನಡೆಸಿದ ಬಿಜೆಡಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ್ದು, ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಮೊದಲ ಬಾರಿ ಅಧಿಕಾರಕ್ಕೆ ಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.