ದೇಶ

ಒಡಿಶಾ ವಿಧಾನಸಭಾ ಸ್ಪೀಕರ್ ಹುದ್ದೆಗೆ ನಾಮಪತ್ರ ಸಲ್ಲಿಸಿದ ಬಿಜೆಪಿ ನಾಯಕಿ ಸುರಮಾ ಪಾಧಿ

ಒಡಿಶಾ ವಿಧಾನಸಭೆಯ ಸ್ಪೀಕರ್ ಹುದ್ದೆಯ ಚುನಾವಣೆಗೆ ಬಿಜೆಪಿ ಹಿರಿಯ ನಾಯಕಿ ಮತ್ತು ರಾಣ್‌ಪುರ ಶಾಸಕಿ ಸುರಮಾ ಪಾಧಿ ಅವರು ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ.

ಒಡಿಶಾ ವಿಧಾನಸಭಾ ಸ್ಪೀಕರ್ ಹುದ್ದೆಗೆ ನಾಮಪತ್ರ ಸಲ್ಲಿಸಿದ ಬಿಜೆಪಿ ನಾಯಕಿ ಸುರಮಾ ಪಾಧಿ
ಸುರಮಾ ಪಾಧಿ
Published On :

ಭುವನೇಶ್ವರ: ಒಡಿಶಾ ವಿಧಾನಸಭೆಯ ಸ್ಪೀಕರ್ ಹುದ್ದೆಯ ಚುನಾವಣೆಗೆ ಬಿಜೆಪಿ ಹಿರಿಯ ನಾಯಕಿ ಮತ್ತು ರಾಣ್‌ಪುರ ಶಾಸಕಿ ಸುರಮಾ ಪಾಧಿ ಅವರು ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಮತ್ತು ಉಪಮುಖ್ಯಮಂತ್ರಿಗಳಾದ ಕೆ.ವಿ.ಸಿಂಗ್ ದೇವ್ ಹಾಗೂ ಪ್ರವತಿ ಪರಿದಾ ಅವರೊಂದಿಗೆ ಪಾಧಿ ಅವರು ಒಡಿಶಾ ವಿಧಾನಸಭೆ ಕಾರ್ಯದರ್ಶಿ ದಶರಥಿ ಸತ್ಪತಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಇದಕ್ಕೂ ಮುನ್ನ ಬಿಜೆಪಿ ಶಾಸಕಾಂಗ ಪಕ್ಷವು ಸ್ಪೀಕರ್ ಹುದ್ದೆಗೆ ಪಾಧಿ ಅವರ ಹೆಸರನ್ನು ಸರ್ವಾನುಮತದಿಂದ ಆಯ್ಕೆ ಮಾಡಿತ್ತು. ಪಾಧಿ ಅವರ ಉಮೇದುವಾರಿಕೆಯನ್ನು ಬೆಂಬಲಿಸುವಂತೆ ಮುಖ್ಯಮಂತ್ರಿಗಳು, ಬಿಜೆಡಿ ಅಧ್ಯಕ್ಷ ನವೀನ್ ಪಟ್ನಾಯಕ್ ಅವರನ್ನು ಕೋರಿದ್ದಾರೆ ಎಂದು ಒಡಿಶಾ ಸಂಸದೀಯ ವ್ಯವಹಾರಗಳ ಸಚಿವ ಮುಖೇಶ್ ಮಹಾಲಿಂಗ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಪ್ರತಿಪಕ್ಷ ಬಿಜೆಡಿ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸದ ಕಾರಣ ಪಾಧಿ ಅವರು ಸ್ಪೀಕರ್ ಚುನಾವಣೆಗೆ ಸ್ಪರ್ಧಿಸಿರುವ ಏಕೈಕ ಅಭ್ಯರ್ಥಿಯಾಗಿದ್ದಾರೆ ಮತ್ತು ಗುರುವಾರ ಒಡಿಶಾ ವಿಧಾನಸಭೆಯ 17ನೇ ಸ್ಪೀಕರ್ ಆಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ಬಿಜೆಡಿಯ ಪ್ರಮೀಳಾ ಮಲ್ಲಿಕ್ ಅವರ ನಂತರ ಸುರಮಾ ಪಾಧಿ ಅವರು ರಾಜ್ಯದ ಎರಡನೇ ಮಹಿಳಾ ಸ್ಪೀಕರ್ ಆಗಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.