ದೇಶ

ಬಜೆಟ್ ಪೂರ್ವ ಸಭೆ: ಭಾಗಿಯಾಗಲು ಸಿಎಂ ಸಿದ್ದರಾಮಯ್ಯಗೆ ಕೇಂದ್ರ ವಿತ್ತ ಸಚಿವೆ ಆಹ್ವಾನ

ಕೇಂದ್ರದಲ್ಲಿ ಎನ್ ಡಿಎ ಮೈತ್ರಿಕೂಟದ ಮೋದಿ 3.0 ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮುಂದಿನ ತಿಂಗಳು ಸಂಸತ್ತಿನ ಮುಂಗಾರು ಅಧಿವೇಶನ ನಡೆಯಲಿದ್ದು ಅದರಲ್ಲಿ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಮೋದಿ 3.0 ಸರ್ಕಾರದ ಮೊದಲ ಸಮಗ್ರ ಬಜೆಟ್‌ ಮಂಡಿಸಲಿದ್ದಾರೆ.

ಬಜೆಟ್ ಪೂರ್ವ ಸಭೆ: ಭಾಗಿಯಾಗಲು ಸಿಎಂ ಸಿದ್ದರಾಮಯ್ಯಗೆ ಕೇಂದ್ರ ವಿತ್ತ ಸಚಿವೆ ಆಹ್ವಾನ
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಸಿಎಂ ಸಿದ್ದರಾಮಯ್ಯ(ಸಂಗ್ರಹ ಚಿತ್ರ)
Published On :

ಬೆಂಗಳೂರು: ಕೇಂದ್ರದಲ್ಲಿ ಎನ್ ಡಿಎ ಮೈತ್ರಿಕೂಟದ ಮೋದಿ 3.0 ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮುಂದಿನ ತಿಂಗಳು ಸಂಸತ್ತಿನ ಮುಂಗಾರು ಅಧಿವೇಶನ ನಡೆಯಲಿದ್ದು ಅದರಲ್ಲಿ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಮೋದಿ 3.0 ಸರ್ಕಾರದ ಮೊದಲ ಸಮಗ್ರ ಬಜೆಟ್‌ ಮಂಡಿಸಲಿದ್ದಾರೆ.

ಇದಕ್ಕೆ ಮುನ್ನ ನಡೆಯುವ ಬಜೆಟ್ ಪೂರ್ವ ಸಭೆಯಲ್ಲಿ ಪಾಲ್ಗೊಳ್ಳುವಂತೆ ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಆಹ್ವಾನಿಸಿದ್ದಾರೆ. ಜೂ.22ರಂದು ದೆಹಲಿಯಲ್ಲಿ ನಡೆಯುವ ಪ್ರೀ ಬಜೆಟ್ ಸಭೆಯಲ್ಲಿ ರಾಜ್ಯದ ಪರ ಭಾಗವಹಿಸಲು ಸಿಎಂಗೆ ಆಹ್ವಾನ ನೀಡಲಾಗಿದ್ದು ನಿರ್ಮಲಾ ಸೀತರಾಮನ್ ಪತ್ರಕ್ಕೆ ಸಿಎಂ ಸಹ ಪ್ರತಿಕ್ರಿಯೆ ನೀಡಿದ್ದಾರೆ.

ಸಭೆಯಲ್ಲಿ ಭಾಗಿಯಾಗಲು ಅಹ್ವಾನಿಸಿದ್ದಕ್ಕೆ ಧನ್ಯವಾದಗಳು. ಜೂ.22ರಂದು ಪೂರ್ವ ನಿಯೋಜಿತ ಕಾರ್ಯಕ್ರಮ ನಿಗದಿಯಾಗಿದೆ. ಹಾಗಾಗಿ ನಾನು ಮೀಟಿಂಗ್​​ನಲ್ಲಿ ಭಾಗಿಯಾಗಲು ಸಾಧ್ಯವಿಲ್ಲ. ನನ್ಮ ಬದಲು ನನ್ನ ಸಂಪುಟದ ಸಹೋದ್ಯೋಗಿ ಸಚಿವ ಕೃಷ್ಣ ಭೈರೇಗೌಡ ಭಾಗಿ ಆಗುತ್ತಾರೆ ಎಂದು ಉತ್ತರಿಸಿದ್ದಾರೆ.

ಮತ್ತೊಂದೆಡೆ ಸಚಿವೆ ನಿರ್ಮಲಾ ಸೀತಾರಾಮನ್ ಭಾರತೀಯ ಕೈಗಾರಿಕಾ ಒಕ್ಕೂಟ ಸಂಘಗಳ ಪ್ರಮುಖ ಪ್ರತಿನಿಧಿಗಳೊಂದಿಗೆ ಬಜೆಟ್ ಪೂರ್ವ ಚರ್ಚೆಗಳನ್ನು ನಡೆಸಲಿದ್ದಾರೆ. ದೆಹಲಿಯ ನಾರ್ತ್ ಬ್ಲಾಕ್‌ನಲ್ಲಿ ಗುರುವಾರ ಸಂಜೆ 4 ರಿಂದ 6 ರವರೆಗೆ ನಡೆಯಲಿರುವ ಸಭೆಯಲ್ಲಿ ಭಾರತೀಯ ವಾಣಿಜ್ಯ ಮತ್ತು ಉದ್ಯಮಗಳ ಒಕ್ಕೂಟ (ಎಫ್‌ಐಸಿಸಿಐ), ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಐ), ಅಸೋಸಿಯೇಟೆಡ್ ಚೇಂಬರ್ಸ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿಸ್ ಆಫ್ ಇಂಡಿಯಾ (ಅಸೋಚಾಮ್) , ಪಿಹೆಚ್ ಡಿ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ ತಮ್ಮ ಬಜೆಟ್ ಸಲಹೆಗಳು ಮತ್ತು ಶಿಫಾರಸುಗಳನ್ನು ಪ್ರಸ್ತುತಪಡಿಸುತ್ತಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.