ದೇಶ

ವಿಡಿಯೋ: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ, ಯಾರಿಗೂ ಹಾನಿ ಇಲ್ಲ

ಬಿಹಾರದಲ್ಲಿ ಶನಿವಾರ ಮತ್ತೊಂದು ಸೇತುವೆ ಕುಸಿದಿದ್ದು, ಒಂದು ವಾರದೊಳಗೆ ನಡೆದ ಎರಡನೇ ಘಟನೆ ಇದಾಗಿದೆ.

ವಿಡಿಯೋ: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ, ಯಾರಿಗೂ ಹಾನಿ ಇಲ್ಲ
ಮಂಗಳವಾರ ಕುಸಿದ ಸೇತುವೆ ದೃಶ್ಯ
Published On :

ಸಿವಾನ್: ಬಿಹಾರದಲ್ಲಿ ಶನಿವಾರ ಮತ್ತೊಂದು ಸೇತುವೆ ಕುಸಿದಿದ್ದು, ಒಂದು ವಾರದೊಳಗೆ ನಡೆದ ಎರಡನೇ ಘಟನೆ ಇದಾಗಿದೆ. ಸಿವಾನ್ ಜಿಲ್ಲೆಯಲ್ಲಿ ಶನಿವಾರ ಸಣ್ಣ ಸೇತುವೆ ಕುಸಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಾರಾವುಂಡಾ ಮತ್ತು ಮಹಾರಾಜ್‌ಗಂಜ್ ಬ್ಲಾಕ್‌ಗಳ ಹಳ್ಳಿಗಳನ್ನು ಸಂಪರ್ಕಿಸುವ ಕಾಲುವೆಯ ಮೇಲೆ ನಿರ್ಮಿಸಲಾಗಿದ್ದ ಸೇತುವೆ ಇಂದು ಬೆಳಗಿನ ಜಾವ 5 ಗಂಟೆಯ ಸುಮಾರಿಗೆ ಕುಸಿದಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಮುಕುಲ್ ಕುಮಾರ್ ಗುಪ್ತಾ ಹೇಳಿದ್ದಾರೆ.

"ಘಟನೆಯಲ್ಲಿ ಯಾರಿಗೂ ಯಾವುದೇ ಗಾಯವಾಗಿಲ್ಲ. ಇದು ತುಂಬಾ ಹಳೆಯ ಸೇತುವೆಯಾಗಿದ್ದು, ಮೇಲ್ನೋಟಕ್ಕೆ, ಕಾಲುವೆಯ ಮೂಲಕ ನೀರು ಬಿಡುವಾಗ ಪಿಲ್ಲರ್‌ಗಳು ಕುಸಿದಿವೆ. ಅದನ್ನು ಪುನಃಸ್ಥಾಪಿಸುವವರೆಗೆ, ಆ ಪ್ರದೇಶದ ಹಳ್ಳಿಗಳ ನಿವಾಸಿಗಳಿಗೆ ಪರ್ಯಾಯ ಮಾರ್ಗದ ವ್ಯವಸ್ಥೆ ಮಾಡಲು ಪ್ರಯತ್ನಿಸುತ್ತಿದ್ದೇವೆ" ಡಿಎಂ ಪಿಟಿಐಗೆ ತಿಳಿಸಿದ್ದಾರೆ.

1991ರಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಲ್ಲಿ 20 ಅಡಿ ಉದ್ದದ ಈ ಸೇತುವೆಯನ್ನು ನಿರ್ಮಿಸಲಾಗಿತ್ತು. ತನಿಖಾ ವರದಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾರಾಜಗಂಜ್‌ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಅನಿಲ್ ಕುಮಾರ್ ಅವರು ತಿಳಿಸಿದ್ದಾರೆ.

ಇದಕ್ಕೂ ಮುನ್ನ, ಮಂಗಳವಾರ, ಅರಾರಿಯಾ ಜಿಲ್ಲೆಯಲ್ಲಿ ಹೊಸದಾಗಿ ನಿರ್ಮಿಸಲಾದ ಸುಮಾರು 180 ಮೀಟರ್ ಉದ್ದದ ಸೇತುವೆ ಕುಸಿದು ಬಿದ್ದಿತ್ತು. ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಇಲಾಖಾ ಕ್ರಮ ತೆಗೆದುಕೊಳ್ಳುವಂತೆ ಗ್ರಾಮೀಣ ಕಾಮಗಾರಿ ಇಲಾಖೆಗೆ ಸೂಚಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.