NEET-UG ಅಕ್ರಮ: CBI ಹೆಗಲಿಗೆ ತನಿಖಾ ಜವಾಬ್ದಾರಿ ಹೊರಿಸಿದ ಕೇಂದ್ರ ಸರ್ಕಾರ
ಮಹತ್ವದ ಬೆಳವಣಿಗೆಯಲ್ಲಿ ಪದವಿಪೂರ್ವ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗುವ ಸ್ಪರ್ಧಾತ್ಮಕ ನೀಟ್ ಪರೀಕ್ಷೆಯಲ್ಲಿ (NEET UG) ನಡೆದಿರುವ ಅಕ್ರಮಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ತನಿಖೆ ಹೊಣೆಯನ್ನು ಕೇಂದ್ರ ಸರ್ಕಾರ ಸಿಬಿಐ ಒಪ್ಪಿಸಿ ಶನಿವಾರ ಆದೇಶಿಸಿದೆ.

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಪದವಿಪೂರ್ವ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗುವ ಸ್ಪರ್ಧಾತ್ಮಕ ನೀಟ್ ಪರೀಕ್ಷೆಯಲ್ಲಿ (NEET UG) ನಡೆದಿರುವ ಅಕ್ರಮಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ತನಿಖೆ ಹೊಣೆಯನ್ನು ಕೇಂದ್ರ ಸರ್ಕಾರ ಸಿಬಿಐ ಒಪ್ಪಿಸಿ ಶನಿವಾರ ಆದೇಶಿಸಿದೆ.
ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ “ಕೆಲವು ಅಕ್ರಮಗಳು, ವಂಚನೆ ಮತ್ತು ದುಷ್ಕೃತ್ಯಗಳ ಪ್ರಕರಣಗಳು ವರದಿಯಾಗಿವೆ. ಪರೀಕ್ಷಾ ಪ್ರಕ್ರಿಯೆಯ ನಿರ್ವಹಣೆಯಲ್ಲಿ ಪಾರದರ್ಶಕತೆಗಾಗಿ, ಶಿಕ್ಷಣ ಸಚಿವಾಲಯದ ಪರಿಶೀಲನೆಯ ನಂತರ ಈ ಬಗ್ಗೆ ಸಮಗ್ರ ತನಿಖೆಗಾಗಿ ಸಿಬಿಐಗೆ ವಹಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ಬಿಡುಗಡೆ ಮಾಡಿರುವ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಪರೀಕ್ಷೆಗಳ ಪಾವಿತ್ರ್ಯವನ್ನು ಖಚಿತಪಡಿಸಿಕೊಳ್ಳಲು ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ರಕ್ಷಿಸಲು ಸರ್ಕಾರ ಬದ್ಧ. ಮೋಸದಲ್ಲಿ ಭಾಗಿಯಾಗಿರುವ ಯಾವುದೇ ವ್ಯಕ್ತಿ, ಸಂಸ್ಥೆ ಕಠಿಣ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಎಂದು ಸಚಿವಾಲಯ ಹೇಳಿದೆ.
ಕಳೆದ ಮೇ 5 ರಂದು ದೇಶದ 4,750 ಕೇಂದ್ರಗಳಲ್ಲಿ ನೀಟ್-ಯುಜಿ ನಡೆದಿದ್ದು, ಸುಮಾರು 24 ಲಕ್ಷ ಅಭ್ಯರ್ಥಿಗಳು ಭಾಗವಹಿಸಿದ್ದರು. ನಿರೀಕ್ಷಿತ ದಿನಾಂಕಕ್ಕಿಂತ ಹತ್ತು ದಿನ ಮುಂಚಿತವಾಗಿ ಜೂನ್ 4 ರಂದು ಫಲಿತಾಂಶಗಳನ್ನು ಘೋಷಿಸಲಾಗಿತ್ತು. ಫಲಿತಾಂಶದ ನಂತರ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ದುಷ್ಕೃತ್ಯಗಳ ಆರೋಪಗಳು ಕೇಳಿಬಂದಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



