ದೇಶ

ತೀಸ್ತಾ ನದಿ ನೀರು ಸಂರಕ್ಷಣೆ ಮತ್ತು ನಿರ್ವಹಣೆ: ಬೃಹತ್ ಯೋಜನೆಗೆ ಭಾರತ- ಬಾಂಗ್ಲಾ ಒಪ್ಪಿಗೆ

ತೀಸ್ತಾ ನದಿಯನ್ನು ಸಂರಕ್ಷಿಸುವ ಮತ್ತು ನಿರ್ವಹಿಸುವ ಬೃಹತ್ ಯೋಜನೆಗೆ ಭಾರತ - ಬಾಂಗ್ಲಾದೇಶ ಶನಿವಾರ ಒಪ್ಪಿಗೆ ನೀಡಿದ್ದು, ಶೀಘ್ರದಲ್ಲೇ ಭಾರತ, ಬಾಂಗ್ಲಾದೇಶಕ್ಕೆ ತಾಂತ್ರಿಕ ತಂಡವನ್ನು ಕಳುಹಿಸಲಿದೆ.

ತೀಸ್ತಾ ನದಿ ನೀರು ಸಂರಕ್ಷಣೆ ಮತ್ತು ನಿರ್ವಹಣೆ: ಬೃಹತ್ ಯೋಜನೆಗೆ ಭಾರತ- ಬಾಂಗ್ಲಾ ಒಪ್ಪಿಗೆ
ಶೇಖ್ ಹಸೀನಾ - ಪ್ರಧಾನಿ ಮೋದಿ
Published On :

ನವದೆಹಲಿ: ತೀಸ್ತಾ ನದಿಯನ್ನು ಸಂರಕ್ಷಿಸುವ ಮತ್ತು ನಿರ್ವಹಿಸುವ ಬೃಹತ್ ಯೋಜನೆಗೆ ಭಾರತ - ಬಾಂಗ್ಲಾದೇಶ ಶನಿವಾರ ಒಪ್ಪಿಗೆ ನೀಡಿದ್ದು, ಶೀಘ್ರದಲ್ಲೇ ಭಾರತ, ಬಾಂಗ್ಲಾದೇಶಕ್ಕೆ ತಾಂತ್ರಿಕ ತಂಡವನ್ನು ಕಳುಹಿಸಲಿದೆ.

ಇಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತಕ್ಕೆ ಭೇಟಿ ನೀಡಿರುವ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರ ನಡುವೆ ನಡೆದ ವ್ಯಾಪಕ ಮಾತುಕತೆಯಲ್ಲಿ

ಸಮಗ್ರ ವ್ಯಾಪಾರ ಒಪ್ಪಂದದ ಕುರಿತು ಮಾತುಕತೆ, ರಕ್ಷಣಾ ಸಂಬಂಧಗಳನ್ನು ಹೆಚ್ಚಿಸುವುದು ಸೇರಿದಂತೆ ಹಲವು ಒಪ್ಪಂದಗಳನ್ನು ಅಂತಿಮಗೊಳಿಸಲಾಯಿತು.

ಹಸಿರು ಸಹಭಾಗಿತ್ವ, ಡಿಜಿಟಲ್ ಪಾಲುದಾರಿಕೆ, ಬ್ಲೂ ಎಕಾನಮಿ, ರೈಲ್ವೆ, ಬಾಹ್ಯಾಕಾಶ, ಹಸಿರು ತಂತ್ರಜ್ಞಾನ, ಆರೋಗ್ಯ ಮತ್ತು ಔಷಧದಂತಹ ನಿರ್ಣಾಯಕ ಕ್ಷೇತ್ರಗಳಲ್ಲಿ ಉಭಯ ದೇಶಗಳ ನಡುವಿನ ಸಂಬಂಧಗಳನ್ನು ಬಲಪಡಿಸಲು 10 ಒಪ್ಪಂದಗಳಿಗೆ ಭಾರತ - ಬಾಂಗ್ಲಾದೇಶ ಸಹಿ ಹಾಕಿವೆ.

ಮಾಧ್ಯಮಗಳಿಗೆ ನೀಡಿದ ಹೇಳಿಕೆಯಲ್ಲಿ, ಜನರ ನಡುವಿ ಸಂಪರ್ಕವನ್ನು ಉಭಯ ರಾಷ್ಟ್ರಗಳ ನಡುವಿನ ಬಾಂಧವ್ಯದ ಅಡಿಪಾಯ ಎಂದು ವಿವರಿಸಿದ ಪ್ರಧಾನಿ ಮೋದಿ, ವೈದ್ಯಕೀಯ ಚಿಕಿತ್ಸೆಗಾಗಿ ಭಾರತಕ್ಕೆ ಬರುವ ಬಾಂಗ್ಲಾದೇಶದ ಜನರಿಗೆ ಭಾರತ ಇ-ವೈದ್ಯಕೀಯ ವೀಸಾ ಸೌಲಭ್ಯವನ್ನು ಪ್ರಾರಂಭಿಸುತ್ತದೆ ಎಂದು ಹೇಳಿದರು.

ಬಾಂಗ್ಲಾದೇಶದ ವಾಯುವ್ಯ ಪ್ರದೇಶದ ಜನರ ಅನುಕೂಲಕ್ಕಾಗಿ ರಂಗ್‌ಪುರದಲ್ಲಿ ಹೊಸ ಸಹಾಯಕ ಹೈಕಮಿಷನ್ ತೆರೆಯಲು ನಾವು ಉಪಕ್ರಮವನ್ನು ತೆಗೆದುಕೊಂಡಿದ್ದೇವೆ. ಇಂದು ಸಂಜೆ ನಡೆಯುವ ಕ್ರಿಕೆಟ್ ವಿಶ್ವಕಪ್ ಪಂದ್ಯಕ್ಕೆ ಎರಡೂ ತಂಡಗಳಿಗೆ ಶುಭ ಹಾರೈಸುತ್ತೇನೆ. ಬಾಂಗ್ಲಾದೇಶದೊಂದಿಗಿನ ನಮ್ಮ ಸಂಬಂಧಗಳಿಗೆ ನಾವು ಹೆಚ್ಚಿನ ಆದ್ಯತೆ ನೀಡುತ್ತೇವೆ ಎಂದಿದ್ದಾರೆ.

ಮಾತುಕತೆಯಲ್ಲಿ, ಮೋದಿ ಮತ್ತು ಹಸೀನಾ ಅವರು ರಕ್ಷಣಾ ಉತ್ಪಾದನೆ ಮತ್ತು ಬಾಂಗ್ಲಾದೇಶದ ಸಶಸ್ತ್ರ ಪಡೆಗಳ ಆಧುನೀಕರಣದ ಕ್ಷೇತ್ರಗಳು ಸೇರಿದಂತೆ ದ್ವಿಪಕ್ಷೀಯ ರಕ್ಷಣಾ ಸಹಕಾರವನ್ನು ಬಲಪಡಿಸಲು ನಿರ್ಧರಿಸಿದರು ಮತ್ತು ಭಯೋತ್ಪಾದನೆ, ಮೂಲಭೂತವಾದ ಹಾಗೂ ಗಡಿಯ ಶಾಂತಿಯುತ ನಿರ್ವಹಣೆಯಲ್ಲಿ ನಮ್ಮ ಸಹಕಾರವನ್ನು ಬಲಪಡಿಸಲು ನಾವು ನಿರ್ಧರಿಸಿದ್ದೇವೆ ಎಂದು ಉಭಯ ನಾಯಕರು ತಿಳಿಸಿದ್ದಾರೆ.

ರೋಹಿಂಗ್ಯಾ ನಿರಾಶ್ರಿತರ ಸಮಸ್ಯೆ ಮತ್ತು ಮ್ಯಾನ್ಮಾರ್‌ನಲ್ಲಿನ ಪರಿಸ್ಥಿತಿ ಮತ್ತು BIMSTEC (ಬಹು ವಲಯದ ತಾಂತ್ರಿಕ ಮತ್ತು ಆರ್ಥಿಕ ಸಹಕಾರಕ್ಕಾಗಿ ಬಂಗಾಳ ಕೊಲ್ಲಿ ಇನಿಶಿಯೇಟಿವ್) ಗುಂಪಿನ ಚೌಕಟ್ಟಿನಡಿಯಲ್ಲಿ ಪ್ರಾದೇಶಿಕ ಸಹಕಾರವನ್ನು ಹೆಚ್ಚಿಸುವ ಬಗ್ಗೆಯೂ ಉಭಯ ನಾಯಕರು ಚರ್ಚಿಸಿದ್ದಾರೆ.

ಹಿಂದೂ ಮಹಾಸಾಗರ ಪ್ರದೇಶದ ನಮ್ಮ ದೃಷ್ಟಿ ಒಂದೇ ಆಗಿದೆ. ಇಂಡೋ-ಪೆಸಿಫಿಕ್ ಸಾಗರಗಳ ಉಪಕ್ರಮಕ್ಕೆ ಸೇರುವ ಬಾಂಗ್ಲಾದೇಶದ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ. ನಾವು BIMSTEC ಮತ್ತು ಇತರ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ನಮ್ಮ ಸಹಕಾರವನ್ನು ಮುಂದುವರಿಸುತ್ತೇವೆ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.