ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ: ಬಿಭವ್ ಕುಮಾರ್ ನ್ಯಾಯಾಂಗ ಬಂಧನ ಜುಲೈ 6 ರವರೆಗೆ ವಿಸ್ತರಣೆ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ಶನಿವಾರ ಜುಲೈ 6ರವರೆಗೆ ವಿಸ್ತರಿಸಿದೆ.

ನವದೆಹಲಿ: ಎಎಪಿ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ಶನಿವಾರ ಜುಲೈ 6ರವರೆಗೆ ವಿಸ್ತರಿಸಿದೆ.
ಮೇ 13 ರಂದು ಮುಖ್ಯಮಂತ್ರಿಯವರ ಅಧಿಕೃತ ನಿವಾಸದಲ್ಲಿ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮೇ 18ರಂದು ಕುಮಾರ್ ಅವರನ್ನು ಬಂಧಿಸಲಾಗಿತ್ತು.
ಕುಮಾರ್ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ಆರೋಪಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಗೌರವ್ ಗೋಯಲ್ ಅವರ ಮುಂದೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ಕೋರ್ಟ್, ಕುಮಾರ್ ನ್ಯಾಯಾಂಗ ಬಂಧನವನ್ನು ಜುಲೈ 6 ರವರೆಗೆ ವಿಸ್ತರಿಸಿದ್ದಾರೆ.
ಮೇ 16 ರಂದು ಕುಮಾರ್ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



