ಉಲ್ಲೇಖದ NEET ಪತ್ರಿಕೆ ಪಡೆಯಲಿರುವ ಬಿಹಾರ ಪೊಲೀಸರು, ತನಿಖೆಗೆ ED ಕೈಜೋಡಿಸುವ ಸಾಧ್ಯತೆ
: ಬಿಹಾರ ಪೋಲೀಸ್ ಇಲಾಖೆಯ ಆರ್ಥಿಕ ಅಪರಾಧಗಳ ಘಟಕವು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ಪದವಿ) 2024 ರ ಉಲ್ಲೇಖ ಪ್ರಶ್ನೆ ಪತ್ರಿಕೆಗಳನ್ನು ಕಳೆದ ತಿಂಗಳು ಶೋಧ ಕಾರ್ಯಾಚರಣೆ ವೇಳೆ ಪಾಟ್ನಾದ ಫ್ಲಾಟ್ ವೊಂದರಿಂದ ಶೋಧ ಕಾರ್ಯಾಚರಣೆಯಲ್ಲಿ ವಶಪಡಿಸಿಕೊಂಡ ದಾಖಲೆಗಳೊಂದಿಗೆ ಹೋಲಿಕೆ ಮಾಡಲು ಪಡೆದುಕೊಂಡಿದ್ದು

ಪಾಟ್ನಾ: ಬಿಹಾರ ಪೋಲೀಸ್ ಇಲಾಖೆಯ ಆರ್ಥಿಕ ಅಪರಾಧಗಳ ಘಟಕವು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ಪದವಿ) 2024 ರ ಉಲ್ಲೇಖ ಪ್ರಶ್ನೆ ಪತ್ರಿಕೆಗಳನ್ನು ಕಳೆದ ತಿಂಗಳು ಶೋಧ ಕಾರ್ಯಾಚರಣೆ ವೇಳೆ ಪಾಟ್ನಾದ ಫ್ಲಾಟ್ ವೊಂದರಿಂದ ಶೋಧ ಕಾರ್ಯಾಚರಣೆಯಲ್ಲಿ ವಶಪಡಿಸಿಕೊಂಡ ದಾಖಲೆಗಳೊಂದಿಗೆ ಹೋಲಿಕೆ ಮಾಡಲು ಪಡೆದುಕೊಂಡಿದ್ದು, ಪ್ರಕರಣದ ಆರೋಪಿಗಳನ್ನು ಬ್ರೈನ್ ಮ್ಯಾಪಿಂಗ್ ಪರೀಕ್ಷೆಗೊಳಪಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ಮೇ ತಿಂಗಳಲ್ಲಿ ನಡೆಸಿದ ವೈದ್ಯಕೀಯ ಪ್ರವೇಶ ಪರೀಕ್ಷೆ NEET ನಲ್ಲಿನ ಅಕ್ರಮದಲ್ಲಿ ಹಣ ವರ್ಗಾವಣೆಯ ವಿಷಯವನ್ನು ಜಾರಿ ನಿರ್ದೇಶನಾಲಯ(ED) ತನಿಖೆ ಮಾಡಬಹುದು ಎಂದು ಹೇಳಿದ್ದಾರೆ.
ಕಳೆದ ತಿಂಗಳು ತನಿಖೆಯನ್ನು ಪ್ರಾರಂಭಿಸಿದ ನಂತರ ಎನ್‌ಟಿಎಗೆ ಉಲ್ಲೇಖದ ಪ್ರಶ್ನೆ ಪತ್ರಿಕೆಗಳಿಗೆ ವಿನಂತಿಸಿಕೊಂಡಿದ್ದೆವು. ಈ ಪತ್ರಿಕೆಗಳನ್ನು ಕಳೆದ ತಿಂಗಳು ಪಾಟ್ನಾ ಫ್ಲಾಟ್‌ನಿಂದ ವಶಪಡಿಸಿಕೊಂಡ ಭಾಗಶಃ ಸುಟ್ಟ ಪತ್ರಿಕೆಗಳೊಂದಿಗೆ ತಾಳೆ ಮಾಡುತ್ತೇವೆ ಎಂದು ಇಡಿ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



