ದೇಶ

18ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ಬಿ ಮಹತಾಬ್‌ ಪ್ರಮಾಣ ವಚನ ಸ್ವೀಕಾರ

ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಬಿಜೆಪಿ ಸದಸ್ಯ ಬಿ ಮಹತಾಬ್‌ಗೆ ನೂತನವಾಗಿ ರಚನೆಯಾದ 18ನೇ ಲೋಕಸಭೆಯ 'ಹಂಗಾಮಿ ಸ್ಪೀಕರ್' ಆಗಿ ಸೋಮವಾರ ಪ್ರಮಾಣ ವಚನ ಬೋಧಿಸಿದರು.

18ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ಬಿ ಮಹತಾಬ್‌ ಪ್ರಮಾಣ ವಚನ ಸ್ವೀಕಾರ
ಭರ್ತೃಹರಿ ಮಹತಾಬ್ ಅವರು ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ ಸ್ವೀಕರಿಸಿದರು
Published On :

ನವದೆಹಲಿ: ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಬಿಜೆಪಿ ಸದಸ್ಯ ಬಿ ಮಹತಾಬ್‌ಗೆ ನೂತನವಾಗಿ ರಚನೆಯಾದ 18ನೇ ಲೋಕಸಭೆಯ 'ಹಂಗಾಮಿ ಸ್ಪೀಕರ್' ಆಗಿ ಸೋಮವಾರ ಪ್ರಮಾಣ ವಚನ ಬೋಧಿಸಿದರು.

ಏಳು ಬಾರಿ ಸಂಸದರಾಗಿರುವ ಮಹತಾಬ್ ಅವರು ಅಧ್ಯಕ್ಷರ ಸಮಿತಿಯೊಂದಿಗೆ ಇಂದು ಮತ್ತು ನಾಳೆ ಲೋಕಸಭೆಯ ಕಲಾಪಗಳನ್ನು ನಡೆಸುವ ಜವಾಬ್ದಾರಿಯನ್ನು ಹೊಂದಿದ್ದಾರೆ. ಈ ಬಾರಿ ಗೆದ್ದ ಅಭ್ಯರ್ಥಿಗಳು 18 ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ.

ನಾಡಿದ್ದು ಬುಧವಾರ, ಅವರು ಹೊಸ ಸ್ಪೀಕರ್ ಆಯ್ಕೆಯಾಗುವವರೆಗೆ ಸದನದ ಅಧ್ಯಕ್ಷತೆ ವಹಿಸಲಿದ್ದಾರೆ. ಅಧ್ಯಕ್ಷರ ಸಮಿತಿಯೊಂದಿಗೆ ಮಹತಾಬ್ ಅವರನ್ನು ಜೂನ್ 20 ರಂದು ಹಂಗಾಮಿ ಸ್ಪೀಕರ್ ಆಗಿ ನೇಮಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.