ಜಾಮೀನಿಗೆ ತಡೆ: ಹೈಕೋರ್ಟ್ ಆದೇಶ ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ್ದ ಸುಪ್ರೀಂ ಕೋರ್ಟ್ ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿಕೆ
ನ್ಯಾಯಮೂರ್ತಿ ಮನೋಜ್ ಮಿಶ್ರಾ ಮತ್ತು ನ್ಯಾಯಮೂರ್ತಿ ಎಸ್ವಿಎನ್ ಭಟ್ಟಿ ನೇತೃತ್ವದ ಸುಪ್ರೀಂ ಕೋರ್ಟ್ನ ದ್ವಿಸದಸ್ಯ ಪೀಠ, ಕೇಜ್ರಿವಾಲ್ ಅವರ ಮನವಿಯ ಕುರಿತು ಯಾವುದೇ ತಕ್ಷಣದ ಆದೇಶವನ್ನು ನೀಡಲು ನಿರಾಕರಿಸಿದೆ.

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ತಮಗೆ ನೀಡಿಲಾಗಿದ್ದ ಜಾಮೀನಿಗೆ ದೆಹಲಿ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ರಜಾಕಾಲದ ಪೀಠ ಅರ್ಜಿಯ ವಿಚಾರಣೆ ಜೂನ್ 26ಕ್ಕೆ ಮುಂದೂಡಿದೆ.
ನ್ಯಾಯಮೂರ್ತಿ ಮನೋಜ್ ಮಿಶ್ರಾ ಮತ್ತು ನ್ಯಾಯಮೂರ್ತಿ ಎಸ್ವಿಎನ್ ಭಟ್ಟಿ ನೇತೃತ್ವದ ಸುಪ್ರೀಂ ಕೋರ್ಟ್ನ ದ್ವಿಸದಸ್ಯ ಪೀಠ, ಕೇಜ್ರಿವಾಲ್ ಅವರ ಮನವಿಯ ಕುರಿತು ಯಾವುದೇ ತಕ್ಷಣದ ಆದೇಶವನ್ನು ನೀಡಲು ನಿರಾಕರಿಸಿದೆ.
"ದೆಹಲಿ ಹೈಕೋರ್ಟ್ ಆದೇಶವು ಮೊದಲು ದಾಖಲೆಗೆ ಬರಲಿ ಮತ್ತು ಯಾವುದೇ ತಕ್ಷಣದ ಆದೇಶವಿಲ್ಲದೆ ನಾವು ಮುಂದಿನ ವಾರ ಪ್ರಕರಣದ ವಿಚಾರಣೆ ಮುಂದುವರಿಸಬಹುದು” ಎಂದು ಸುಪ್ರೀಂ ಕೋರ್ಟ್ ಹೇಳಿ, ಕೇಜ್ರಿವಾಲ್ ಅವರ ಅರ್ಜಿಯ ವಿಚಾರಣೆಯನ್ನು ಜೂನ್ 26, ಬುಧವಾರಕ್ಕೆ ಮುಂದೂಡಿತು.
ವಿಚಾರಣಾ ನ್ಯಾಯಾಲಯವು ಕೇಜ್ರಿವಾಲ್ ಅವರಿಗೆ ನೀಡಿದ ಜಾಮೀನನ್ನು ಪ್ರಶ್ನಿಸಿ ಇಡಿ ಸಲ್ಲಿಸಿದ ಮೇಲ್ಮನವಿಯ ಮೇಲೆ ದೆಹಲಿ ಹೈಕೋರ್ಟ್ ತಡೆ ನೀಡಿದೆ ಮತ್ತು ತನ್ನ ಆದೇಶವನ್ನು ಕಾಯ್ದಿರಿಸಿದೆ. ಹೈಕೋರ್ಟ್ ತನ್ನ ಆದೇಶವನ್ನು ನಾಳೆ ಅಥವಾ ಬುಧವಾರ ಪ್ರಕಟಿಸುವ ನಿರೀಕ್ಷೆಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



