ದೇಶ

ಲೋಕಸಭೆ ವಿಪಕ್ಷ ನಾಯಕನಾಗಿ Rahul Gandhi ಆಯ್ಕೆ

ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ.

ಲೋಕಸಭೆ ವಿಪಕ್ಷ ನಾಯಕನಾಗಿ Rahul Gandhi ಆಯ್ಕೆ
ರಾಹುಲ್ ಗಾಂಧಿ
Published On :

ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ಕಾಂಗ್ರೆಸ್ ನಾಯಕ ಹಾಗೂ ರಾಯ್​ಬರೇಲಿ ಸಂಸದ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ.

ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ. ಇಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಇಂಡಿಯಾ ಮೈತ್ರಿಕೂಟ ಸಭೆ ನಡೆಯಿತು. ಈ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡುವ ಬಗ್ಗೆ ಚರ್ಚೆ ನಡೆಸಲಾಯಿತು.

ಇಂಡಿಯಾ ಬ್ಲಾಕ್ ಸಭೆಯ ನಂತರ ಮಾಹಿತಿ ನೀಡಿದ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಸಂಸದ ಕೆ.ಸಿ. ವೇಣುಗೋಪಾಲ್, ಈ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ಸದನದ ವಿರೋಧ ಪಕ್ಷದ ನಾಯಕರನ್ನಾಗಿ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅವರು ದೆಹಲಿಯ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಿಂದ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಪಾಲ್ಗೊಂಡ ಬಳಿಕ ಈ ನಿರ್ಣಯ ಹೊರಬಿದ್ದಿದೆ. ಬುಧವಾರ ಲೋಕಸಭೆ ಸ್ಪೀಕರ್ ಚುನಾವಣೆ ನಡೆಯಲಿದ್ದು, ಇದರ ಬೆನ್ನಲ್ಲೇ ವಿರೋಧ ಪಕ್ಷದ ನಾಯಕನ್ನಾಗಿ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ.

ಪತ್ರ ಬರೆದ ಸೋನಿಯಾ ಗಾಂಧಿ

ಕಾಂಗ್ರೆಸ್‌ನ ಸಂಸದೀಯ ಪಕ್ಷದ ನಾಯಕಿ ಸೋನಿಯಾ ಗಾಂಧಿಯವರು ಈ ಸಂಬಂಧ ಲೋಕಸಭಾ ಹಂಗಾಮಿ ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ. ವಿರೋಧ ಪಕ್ಷಗಳ ‘ಇಂಡಿಯಾ’ ಬಣದ ಪಕ್ಷಗಳ ಸದನದ ನಾಯಜರ ಸಭೆಯಲ್ಲಿಯೂ ಈ ವಿಚಾರ ಚರ್ಚಿಸಲಾಗಿದ್ದು, ಬಣದ ಎಲ್ಲ ನಾಯಕರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚೆಗಷ್ಟೇ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರನ್ನಾಗಿ ಮಾಡಬೇಕೆಂದು ಒಮ್ಮತದ ಆಗ್ರಹ ಕೇಳಿಬಂದಿತ್ತು. ಈ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ಪಕ್ಷದ ನಾಯಕರನ್ನಾಗಿ ನೇಮಿಸಬೇಕು ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರು ನಿರ್ಣಯ ಅಂಗೀಕರಿಸಿದ್ದರು.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಅವರ ಹೆಸರಿನ ಪ್ರಸ್ತಾವನೆ ಅಂಗೀಕಾರವಾದಾಗ, ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರಿಗೆ ಈ ಬಗ್ಗೆ ಯೋಚಿಸಲು ಸ್ವಲ್ಪ ಸಮಯ ಕೇಳಿದ್ದರು.

ಅಂದಹಾಗೆ 2014 ಮತ್ತು 2019ರ ಲೋಕಸಭೆಯಲ್ಲಿ ಕ್ರಮವಾಗಿ ಕಾಂಗ್ರೆಸ್ 44 ಮತ್ತು 52 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿತ್ತು. ವಿರೋಧ ಪಕ್ಷಗಳ ಸ್ಥಾನಮಾನಕ್ಕೆ ಕನಿಷ್ಠ 54 ಸ್ಥಾನಗಳ ಅಗತ್ಯವಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.