ದೇಶ

ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ: ಆರೋಪಿ ಬಾಲಕನ ರಿಮಾಂಡ್ ಹೋಂನಿಂದ ಬಿಡುಗಡೆಗೆ ಮುಂಬೈ ಹೈಕೋರ್ಟ್ ಆದೇಶ

ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣದ ಅಪ್ರಾಪ್ತ ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಮುಂಬೈ ಹೈಕೋರ್ಟ್ ಮಂಗಳವಾರ ಆದೇಶ ನೀಡಿದೆ.

ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ: ಆರೋಪಿ ಬಾಲಕನ ರಿಮಾಂಡ್ ಹೋಂನಿಂದ ಬಿಡುಗಡೆಗೆ ಮುಂಬೈ ಹೈಕೋರ್ಟ್ ಆದೇಶ
ಅಪಘಾತಕ್ಕೀಡಾಗಿದ್ದ ಕಾರು
Published On :

ಪುಣೆ: ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣದ ಅಪ್ರಾಪ್ತ ಆರೋಪಿಯನ್ನು ಬಿಡುಗಡೆ ಮಾಡುವಂತೆ ಮುಂಬೈ ಹೈಕೋರ್ಟ್ ಮಂಗಳವಾರ ಆದೇಶ ನೀಡಿದೆ. ನ್ಯಾಯಾಲಯವು ರಿಮಾಂಡ್ ಆದೇಶವನ್ನು ಕಾನೂನುಬಾಹಿರವೆಂದು ಘೋಷಿಸಿ ಅದನ್ನು ರದ್ದುಗೊಳಿಸಿತು.

ಪ್ರಸ್ತುತ ಅಬ್ಸರ್ವೇಶನ್ ಹೋಮ್‌ನಲ್ಲಿರುವ ಅಪ್ರಾಪ್ತ ಬಾಲಕನನ್ನು ಬಿಡುಗಡೆ ಮಾಡುವಂತೆ ಆತನ ತಂದೆಯ ಚಿಕ್ಕಮ್ಮ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ನ್ಯಾಯಮೂರ್ತಿ ಭಾರತಿ ಡಾಂಗ್ರೆ ಮತ್ತು ನ್ಯಾಯಮೂರ್ತಿ ಮಂಜುಷಾ ದೇಶಪಾಂಡೆ ಅವರ ವಿಭಾಗೀಯ ಪೀಠವು ಅಂಗೀಕರಿಸಿತು. ಅಪ್ರಾಪ್ತ ಬಾಲಕನನ್ನು ಬಿಡುಗಡೆ ಮಾಡುವಂತೆ ಬಾಲ ನ್ಯಾಯ ಮಂಡಳಿಗೆ ನ್ಯಾಯಾಲಯ ಆದೇಶಿಸಿದೆ.

ಪುಣೆ ಪೋರ್ಷೆ ಅಪಘಾತ ಪ್ರಕರಣದ ಅಪ್ರಾಪ್ತ ಆರೋಪಿಯನ್ನು ಈಗಾಗಲೇ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದ್ದು, ಆತನನ್ನು ವೀಕ್ಷಣಾ ಕೇಂದ್ರಕ್ಕೆ ಜುವೆನೈಲ್ ಜಸ್ಟಿಸ್ ಬೋರ್ಡ್ ರಿಮಾಂಡ್ ಮಾಡಿದ್ದು ಹೇಗೆ ಎಂದು ಕಳೆದ ವಾರ ವಿಚಾರಣೆಯ ವೇಳೆ ನ್ಯಾಯಾಲಯ ಪ್ರಶ್ನಿಸಿತ್ತು.

ಕಳೆದ ಮೇ 19ರಂದು, ಪುಣೆಯ ಪ್ರಮುಖ ಉದ್ಯಮಿ ಬಿಲ್ಡರ್‌ ವೊಬ್ಬರ 17 ವರ್ಷದ ಪುತ್ರ ಮದ್ಯ ಸೇವಿಸಿ ಅಮಲಿನಲ್ಲಿ ಪೋರ್ಚೆ ಟೇಕಾನ್ ಕಾರನ್ನು ಚಾಲನೆ ಮಾಡುತ್ತಿದ್ದ ವೇಳೆ ಕಲ್ಯಾಣಿ ನಗರ ಪ್ರದೇಶದಲ್ಲಿ ನಿಯಂತ್ರಣ ಕಳೆದುಕೊಂಡು ಬೈಕ್ ಗೆ ಡಿಕ್ಕಿ ಹೊಡೆದಿದ್ದನು. ಘಟನೆಯಲ್ಲಿ ಇಬ್ಬರು ಸಾವಿಗೀಡಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.