ಕಾಶ್ಮೀರ: ದೋಡಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರನ ಹತ್ಯೆ
ಜೂನ್ 11 ಮತ್ತು 12 ರಂದು ಗುಡ್ಡಗಾಡು ಜಿಲ್ಲೆಯಲ್ಲಿ ನಡೆದ ಅವಳಿ ಭಯೋತ್ಪಾದಕ ದಾಳಿಯ ನಂತರ ಸೇನೆ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜೊತೆಗೆ ಪೊಲೀಸರ ತೀವ್ರ ಶೋಧ ಮತ್ತು ಕಾರ್ಡನ್ ಕಾರ್ಯಾಚರಣೆ ನಡೆಸುತ್ತಿದೆ.

ಭದರ್ವಾ/ಜಮ್ಮು: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಜೂನ್ 11 ಮತ್ತು 12 ರಂದು ಗುಡ್ಡಗಾಡು ಜಿಲ್ಲೆಯಲ್ಲಿ ನಡೆದ ಅವಳಿ ಭಯೋತ್ಪಾದಕ ದಾಳಿಯ ನಂತರ ಸೇನೆ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜೊತೆಗೆ ಪೊಲೀಸರ ತೀವ್ರ ಶೋಧ ಮತ್ತು ಕಾರ್ಡನ್ ಕಾರ್ಯಾಚರಣೆ ನಡೆಸುತ್ತಿದ್ದು, ಇಂದು ಬೆಳಗ್ಗೆ 9.50 ರ ಸುಮಾರಿಗೆ ಗಂಡೋ ಪ್ರದೇಶದ ಬಜಾದ್ ಗ್ರಾಮದಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ ಪ್ರಾರಂಭವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜೂನ್ 11 ರಂದು ಚತ್ತರಗಲ್ಲದ ಚೆಕ್ ಪೋಸ್ಟ್ ಮೇಲೆ ಭಯೋತ್ಪಾದಕರು ದಾಳಿ ಮಾಡಿದಾಗ ಆರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು. ಮರುದಿನ ಗಂಡೋ ಪ್ರದೇಶದ ಕೋಟಾದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಪೊಲೀಸ್ ಗಾಯಗೊಂಡರು. ಈ ಅವಳಿ ದಾಳಿಯ ನಂತರ, ಭದ್ರತಾ ಪಡೆಗಳು ತಮ್ಮ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದವು ಮತ್ತು ಗಡಿ ನುಸುಳಿದ ನಾಲ್ವರು ಪಾಕಿಸ್ತಾನಿ ಭಯೋತ್ಪಾದಕರ ತಲೆಗೆ ತಲಾ 5 ಲಕ್ಷ ರೂಪಾಯಿ ನಗದು ಬಹುಮಾನವನ್ನು ಘೋಷಿಸಿದರು.
ಇಂದು ಭದ್ರತಾ ಪಡೆಗಳ ಸಹಾಯದಿಂದ ಪೊಲೀಸರು ಸಿನೂ ಪಂಚಾಯತ್ ಗ್ರಾಮದಲ್ಲಿ ಕಾರ್ಯಾಚರಣೆ ಪ್ರಾರಂಭಿಸಿದರು. ಆದರೆ ಮಣ್ಣಿನ ಮನೆಯಲ್ಲಿ ಅಡಗಿದ್ದ ಭಯೋತ್ಪಾದಕರು ಪೊಲೀಸರ ಮೇಲೆ ಭಾರೀ ಗುಂಡಿನ ದಾಳಿ ನಡೆಸಿದರು, ಪ್ರತೀಕಾರದ ಗುಂಡಿನ ದಾಳಿಯಲ್ಲಿ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಯಿತು ಎಂದು ಅಧಿಕಾರಿ ಹೇಳಿದ್ದಾರೆ.
ಏತನ್ಮಧ್ಯೆ, ರಾಜೌರಿ ಜಿಲ್ಲೆಯ ಚಿಂಗಸ್ ಪ್ರದೇಶದ ಪಿಂಡ್ ಎಂಬ ಹಳ್ಳಿಯಲ್ಲಿ ಚೀನಾ ನಿರ್ಮಿತ ಕೈ ಗ್ರೆನೇಡ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



