ದೇಶ

ದೆಹಲಿ ಜಲ ಸಚಿವೆ ಅತಿಶಿ LNJP ಆಸ್ಪತ್ರೆಯಿಂದ ಡಿಸ್ಚಾರ್ಜ್

ಸಚಿವೆ ಅತಿಶಿ ಅವರು ಇಂದು ಬೆಳಗ್ಗೆ 10.30ಕ್ಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೆಹಲಿ ಜಲ ಸಚಿವೆ ಅತಿಶಿ LNJP ಆಸ್ಪತ್ರೆಯಿಂದ ಡಿಸ್ಚಾರ್ಜ್
ದೆಹಲಿ ಜಲ ಸಚಿವೆ ಅತಿಶಿ
Published On :

ನವದೆಹಲಿ: ಹರಿಯಾಣ ಸರ್ಕಾರ ನಮ್ಮ ಪಾಲಿನ ನೀರು ಹರಿಸಬೇಕು ಎಂದು ಒತ್ತಾಯಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ವೇಳೆ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ದೆಹಲಿ ಸಚಿವೆ ಅತಿಶಿ ಅವರು ಗುರುವಾರ ಬೆಳಗ್ಗೆ ಎಲ್‌ಎನ್‌ಜೆಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಸಚಿವೆ ಅತಿಶಿ ಅವರು ಇಂದು ಬೆಳಗ್ಗೆ 10.30ಕ್ಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಿಜೆಪಿ ಆಡಳಿತವಿರುವ ಹರಿಯಾಣ, ದೆಹಲಿಯ ಪಾಲಿನ ನೀರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಎಎಪಿ ನಾಯಕಿ ಮತ್ತು ದೆಹಲಿಯ ಜಲ ಸಚಿವೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದಲ್ಲಿ ಕುಳಿತಿದ್ದರು. ಐದು ದಿನಗಳ ಉಪವಾಸ ಸತ್ಯಾಗ್ರಹದ ನಂತರ ಅವರ ರಕ್ತದಲ್ಲಿನ ಸಕ್ಕರೆ ಪ್ರಮಾಣ ಕಡಿಮೆಯಾದ ನಂತರ ಮಂಗಳವಾರ ಬೆಳ್ಳಂಬೆಳಗ್ಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

ಆರಂಭದಲ್ಲಿ ಅತಿಶಿ ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು ಮತ್ತು ನಂತರ ಅವರ ಆರೋಗ್ಯ ಸ್ಥಿತಿ ಸುಧಾರಿಸಿದ ನಂತರ ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರಿಸಲಾಯಿತು.

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಮತ್ತು ಸಿಪಿಎಂ ನಾಯಕಿ ವೃಂದಾ ಕಾರಟ್ ಅವರು ಬುಧವಾರ ಆಸ್ಪತ್ರೆಯಲ್ಲಿ ಅತಿಶಿ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.