ದೇಶ

ಬಿಹಾರಕ್ಕೆ 'ವಿಶೇಷ ಸ್ಥಾನಮಾನ' ನೀಡುವಂತೆ ಕೇಂದ್ರಕ್ಕೆ ಜೆಡಿಯು ಒತ್ತಾಯ; ಕಾರ್ಯಾಧ್ಯಕ್ಷರಾಗಿ ಸಂಜಯ್ ಝಾ ನೇಮಕ

ಸಭೆಯಲ್ಲಿ, ರಾಜ್ಯಸಭಾ ಸದಸ್ಯ ಸಂಜಯ್ ಝಾ ಅವರನ್ನು ಜೆಡಿಯುನ ಹೊಸ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಯಿತು. ಅಲ್ಲದೆ ಜೆಡಿಯು ಎನ್‌ಡಿಎನಲ್ಲಿಯೇ ಉಳಿಯಲು ನಿರ್ಧರಿಸಲಾಯಿತು.

ಬಿಹಾರಕ್ಕೆ 'ವಿಶೇಷ ಸ್ಥಾನಮಾನ' ನೀಡುವಂತೆ ಕೇಂದ್ರಕ್ಕೆ ಜೆಡಿಯು ಒತ್ತಾಯ; ಕಾರ್ಯಾಧ್ಯಕ್ಷರಾಗಿ ಸಂಜಯ್ ಝಾ ನೇಮಕ
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (ಸಂಗ್ರಹ ಚಿತ್ರ)
Published On :

ನವದೆಹಲಿ: ದೆಹಲಿಯಲ್ಲಿ ಶನಿವಾರ ನಡೆದ ಜೆಡಿಯು ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಕೇಂದ್ರ ಸರ್ಕಾರ ಬಿಹಾರಕ್ಕೆ ವಿಶೇಷ ಸ್ಥಾನಮಾನ ಅಥವಾ ವಿಶೇಷ ಪ್ಯಾಕೇಜ್ ನೀಡಬೇಕು ಎಂಬ ನಿರ್ಣಯವನ್ನು ಅಂಗೀಕರಿಸಿದೆ.

ಸಭೆಯಲ್ಲಿ, ರಾಜ್ಯಸಭಾ ಸದಸ್ಯ ಸಂಜಯ್ ಝಾ ಅವರನ್ನು ಜೆಡಿಯುನ ಹೊಸ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಯಿತು. ಅಲ್ಲದೆ ಜೆಡಿಯು ಎನ್‌ಡಿಎನಲ್ಲಿಯೇ ಉಳಿಯಲು ನಿರ್ಧರಿಸಲಾಯಿತು.

NEET-UG ಪ್ರಶ್ನೆ ಪತ್ರಿಕೆ ಸೋರಿಕೆಯ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದ್ದು, ಪೇಪರ್ ಸೋರಿಕೆ ತಡೆಯಲು ಕಠಿಣ ಕಾನೂನುಗಳನ್ನು ಜಾರಿಗೆ ತರಬೇಕು ಎಂಬ ಬೇಡಿಕೆಯನ್ನು ಜೆಡಿಯು ನಾಯಕರು ಮುಂದಿಟ್ಟರು.

ಬಿಹಾರಕ್ಕೆ "ವಿಶೇಷ ಸ್ಥಾನಮಾನ"ದ ಬೇಡಿಕೆ ನಿತೀಶ್ ಕುಮಾರ್ ನೇತೃತ್ವದ ಜೆಡಿಯುನ ನಿರಂತರ ಬೇಡಿಕೆಯಾಗಿದ್ದು, ಬಿಹಾರ ಸಿಎಂ ಈ ವರ್ಷದ ಆರಂಭದಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ(ಎನ್‌ಡಿಎ) ಸೇರಿದಾಗಿನಿಂದ ಅದು ಮತ್ತಷ್ಟು ಪ್ರಾಮುಖ್ಯತೆ ಪಡೆದುಕೊಂಡಿದೆ.

ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಯು ನಾಯಕ ಕೆಸಿ ತ್ಯಾಗಿ, ಸಿಎಂ ನಿತೀಶ್ ಕುಮಾರ್ ಅವರು ರಾಷ್ಟ್ರೀಯ ಕಾರ್ಯಕಾರಿಣಿಯ ಮುಂದೆ ಜೆಡಿಯು ಯಾವಾಗಲೂ ಎನ್‌ಡಿಎ ಮೈತ್ರಿಕೂಟದ ಭಾಗವಾಗಿರುವುದಾಗಿ ಘೋಷಿಸಿದ್ದಾರೆ. ರಾಜ್ಯಸಭಾ ಸಂಸದ ಸಂಜಯ್‌ ಝಾ ಅವರನ್ನು ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ನಾವು ವಿಶೇಷ ಸ್ಥಾನಮಾನ ಮತ್ತು ಆರ್ಥಿಕ ಪ್ಯಾಕೇಜ್‌ಗಾಗಿ ಹೋರಾಟ ಮುಂದುವರಿಸುತ್ತೇವೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.