NEET-UG ಪೇಪರ್ ಸೋರಿಕೆ: ಗುಜರಾತ್‌ನಲ್ಲಿ ಸಿಬಿಐ ಶೋಧ!
ದೇಶಾದ್ಯಂತ ವ್ಯಾಪಕ ಟೀಕೆ,ಆಕ್ರೋಶಕ್ಕೆ ಕಾರಣವಾಗಿರುವ ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆ' NEET-UG' ಪೇಪರ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ ಸಿಬಿಐ ಗುಜರಾತ್‌ನ ಏಳು ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿರುವುದಾಗಿ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಅಹಮದಾಬಾದ್: ದೇಶಾದ್ಯಂತ ವ್ಯಾಪಕ ಟೀಕೆ,ಆಕ್ರೋಶಕ್ಕೆ ಕಾರಣವಾಗಿರುವ ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆ' NEET-UG' ಪೇಪರ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ ಸಿಬಿಐ ಗುಜರಾತ್‌ನ ಏಳು ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿರುವುದಾಗಿ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಆನಂದ್, ಖೇಡಾ, ಅಹಮದಾಬಾದ್ ಮತ್ತು ಗೋದ್ರಾ ಜಿಲ್ಲೆಗಳಲ್ಲಿ ಶಂಕಿತರ ನಿವಾಸಗಳಲ್ಲಿ ಬೆಳಿಗ್ಗೆ ಕಾರ್ಯಾಚರಣೆ ಪ್ರಾರಂಭವಾಯಿತು ಎಂದು ಅವರು ಮಾಹಿತಿ ನೀಡಿದ್ದಾರೆ.
(NEET-UG) ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಜಾರ್ಖಂಡ್‌ನ ಹಜಾರಿಬಾಗ್‌ನ ಶಾಲೆಯೊಂದರ ಪ್ರಾಂಶುಪಾಲರು, ಉಪಪ್ರಾಂಶುಪಾಲರು ಮತ್ತು ಹಿಂದಿ ಪತ್ರಿಕೆಯೊಂದರ ಪತ್ರಕರ್ತರೊಬ್ಬರನ್ನು ಸಿಬಿಐ ಶುಕ್ರವಾರ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೇ 5 ರಂದು ರಾಷ್ಟ್ರೀಯ ಶಿಕ್ಷಣ ಪ್ರಾಧಿಕಾರ (ಎನ್‌ಟಿಎ) ನಡೆಸಿದ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ಓಯಸಿಸ್ ಶಾಲೆಯ ಪ್ರಾಂಶುಪಾಲ ಎಹ್ಸಾನುಲ್ ಹಕ್ ಅವರನ್ನು ಪರೀಕ್ಷೆಗೆ ಹಜಾರಿಬಾಗ್‌ನ ನಗರ ಸಂಯೋಜಕರನ್ನಾಗಿ ಮಾಡಲಾಗಿತ್ತು ಎಂದು ಹೇಳಿದರು.
ಉಪಪ್ರಾಂಶುಪಾಲ ಇಮ್ತಿಯಾಜ್ ಆಲಂ ಅವರನ್ನು ಎನ್‌ಟಿಎ ವೀಕ್ಷಕರಾಗಿ ಮತ್ತು ಓಯಸಿಸ್ ಶಾಲೆಯ ಕೇಂದ್ರ ಸಂಯೋಜಕರನ್ನಾಗಿ ನೇಮಿಸಲಾಗಿತ್ತು. ಪೇಪರ್ ಸೋರಿಕೆಗೆ ಸಂಬಂಧಿಸಿದಂತೆ ಜಿಲ್ಲೆಯ ಇನ್ನೂ ಐದು ಜನರನ್ನು ಸಿಬಿಐ ವಿಚಾರಣೆ ನಡೆಸುತ್ತಿದೆ. ಪ್ರಾಂಶುಪಾಲರು ಮತ್ತು ಉಪಪ್ರಾಂಶುಪಾಲರಿಗೆ ಸಹಾಯ ಮಾಡಲು ಯತ್ನಿಸಿದ ಆರೋಪದ ಮೇಲೆ ಪತ್ರಕರ್ತ ಜಮಾಲುದ್ದೀನ್ ಅನ್ಸಾರಿ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
NEET-UG ಪೇಪರ್ ಸೋರಿಕೆ ಪ್ರಕರಣದಲ್ಲಿ ಸಿಬಿಐ ಆರು ಎಫ್‌ಐಆರ್‌ಗಳನ್ನು ದಾಖಲಿಸಿದೆ. ಇದರಲ್ಲಿ ಕೇಂದ್ರ ಶಿಕ್ಷಣ ಸಚಿವಾಲಯದ ಉಲ್ಲೇಖದ ಮೇಲೆ ತನ್ನದೇ ಆದ ಎಫ್‌ಐಆರ್ ಮತ್ತು ತನಿಖೆ ವಹಿಸಿಕೊಂಡ ರಾಜ್ಯಗಳಿಂದ ಐದು ಸೇರಿವೆ. ತನಿಖಾ ಸಂಸ್ಥೆಯು ಬಿಹಾರ ಮತ್ತು ಗುಜರಾತ್‌ನಲ್ಲಿ ತಲಾ ಒಂದು ಮತ್ತು ರಾಜಸ್ಥಾನದಲ್ಲಿ ಮೂರು ಪ್ರಕರಣಗಳನ್ನು ವಹಿಸಿಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



