ತೆಲಂಗಾಣ: ಹಿರಿಯ ಕಾಂಗ್ರೆಸ್ ನಾಯಕ ಡಿ ಶ್ರೀನಿವಾಸ್ ನಿಧನ
ಅವಿಭಜಿತ ಆಂಧ್ರಪ್ರದೇಶ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಡಿ ಶ್ರೀನಿವಾಸ್ ಶನಿವಾರ ಹೈದರಾಬಾದ್‌ನಲ್ಲಿ ನಿಧನರಾದರು ಎಂದು ಅವರ ಪುತ್ರ ಮತ್ತು ನಿಜಾಮಾಬಾದ್ ಸಂಸದ ಡಿ ಅರವಿಂದ್ ಹೇಳಿದ್ದಾರೆ.

ಹೈದರಾಬಾದ್: ಅವಿಭಜಿತ ಆಂಧ್ರಪ್ರದೇಶ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಡಿ ಶ್ರೀನಿವಾಸ್ ಶನಿವಾರ ಹೈದರಾಬಾದ್‌ನಲ್ಲಿ ನಿಧನರಾದರು ಎಂದು ಅವರ ಪುತ್ರ ಮತ್ತು ನಿಜಾಮಾಬಾದ್ ಸಂಸದ ಡಿ ಅರವಿಂದ್ ಹೇಳಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಶ್ರೀನಿವಾಸ್ ಕಳೆದ ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಶ್ರೀನಿವಾಸ್ 2004 ಮತ್ತು 2009 ರ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿದ್ದರು. ಮಾಜಿ ಮುಖ್ಯಮಂತ್ರಿ ವೈ ಎಸ್ ರಾಜಶೇಖರ್ ರೆಡ್ಡಿ ಅವರ ಸಂಪುಟದಲ್ಲಿ ಸಚಿವರಾಗಿದ್ದರು. ಅವರು ಕಾಂಗ್ರೆಸ್ ತೊರೆದು 2016 ರಿಂದ 2022 ರವರೆಗೆ ಭಾರತ್ ರಾಷ್ಟ್ರ ಸಮಿತಿಯ ರಾಜ್ಯಸಭಾ ಸದಸ್ಯರಾಗಿದ್ದರು. ತದನಂತರ ನಂತರ ಮತ್ತೆ ಕಾಂಗ್ರೆಸ್ ಸೇರಿದ್ದರು.
ಶ್ರೀನಿವಾಸ್ ಅವರ ನಿಧನಕ್ಕೆ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ, ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ, ತೆಲಂಗಾಣ ಸಚಿವರು, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಸಂತಾಪ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


