ದೇಶ

ಪಂಜಾಬ್‌: ಆಮ್ ಆದ್ಮಿ ಪಕ್ಷದ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಶುಕ್ರವಾರ ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತನೊಬ್ಬನನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಂಜಾಬ್‌: ಆಮ್ ಆದ್ಮಿ ಪಕ್ಷದ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು
ಪ್ರಾತಿನಿಧಿಕ ಚಿತ್ರ
Published On :

ಅಮೃತಸರ: ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಶುಕ್ರವಾರ ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತನೊಬ್ಬನನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುರುಪ್ರೀತ್ ಸಿಂಗ್ ಅಲಿಯಾಸ್ ಗೋಪಿ ಚೋಹ್ಲಾ ತನ್ನ ಕಾರಿನಲ್ಲಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕಾಗಿ ಕಪುರ್ತಲಾ ಜಿಲ್ಲೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.

ಅವರು ಒಬ್ಬರೇ ಪ್ರಯಾಣಿಸುತ್ತಿದ್ದರು ಎಂದು ಅವರು ಹೇಳಿದರು.

ಸಿಂಗ್ ಅವರು ಫತೇಬಾದ್ ಮತ್ತು ಗೋಯಿಂಡ್ವಾಲ್ ಸಾಹಿಬ್ ನಡುವಿನ ರೈಲ್ವೆ ಕ್ರಾಸಿಂಗ್ ಅನ್ನು ತಲುಪಿದಾಗ, ಅವರನ್ನು ಹಿಂಬಾಲಿಸಿದ ದುಷ್ಕರ್ಮಿಗಳು ಅವರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಕುರಿತು ಮಾಹಿತಿ ಪಡೆದ ಪೊಲೀಸ್ ಉಪಾಧೀಕ್ಷಕ ರವೀಶರ್ ಸಿಂಗ್ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.

ದಾಳಿಕೋರರನ್ನು ಬಂಧಿಸಲು ಹಲವು ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.