ದೇಶ

ಲೋಕಸಭಾ ಚುನಾವಣೆ: ಎನ್ ಡಿಎ ಸೇರ್ಪಡೆಯಾದ ರಾಷ್ಟ್ರೀಯ ಲೋಕ ದಳ!

ಜಯಂತ್ ಚೌಧರಿ ಅವರ ರಾಷ್ಟ್ರೀಯ ಲೋಕ ದಳ ಔಪಚಾರಿಕವಾಗಿ ಶನಿವಾರ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ ಸೇರ್ಪಡೆಯಾದರು.

ಲೋಕಸಭಾ ಚುನಾವಣೆ: ಎನ್ ಡಿಎ ಸೇರ್ಪಡೆಯಾದ ರಾಷ್ಟ್ರೀಯ ಲೋಕ ದಳ!
ಅಮಿತ್ ಶಾ, ಜಯಂತ್ ಚೌಧರಿ — ANI
Published On :

ನವದೆಹಲಿ: ಜಯಂತ್ ಚೌಧರಿ ಅವರ ರಾಷ್ಟ್ರೀಯ ಲೋಕ ದಳ ಔಪಚಾರಿಕವಾಗಿ ಶನಿವಾರ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ ಸೇರ್ಪಡೆಯಾದರು.

ರಾಷ್ಟ್ರ ರಾಜಧಾನಿಯಲ್ಲಿ ಅಮಿತ್ ಶಾ ಅವರನ್ನು ಚೌಧರಿ ಭೇಟಿಯಾದ ಬಳಿಕ ಎನ್ ಡಿಎಗೆ ಸೇರ್ಪಡೆಯಾಗಿರುವುದಾಗಿ ಅವರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿದ್ದಾರೆ.

ಆರ್ ಎಲ್ ಪಿ ಮೊದಲಿಗೆ ವಿಪಕ್ಷಗಳ ಮೈತ್ರಿಕೂಟದಲ್ಲಿತ್ತು. ಆದರೆ, ಇದೀಗ ಬಿಜೆಪಿಯೊಂದಿಗೆ ಸೇರ್ಪಡೆಯಿಂದಾಗಿ ವಿಪಕ್ಷಗಳ ಮೈತ್ರಿಕೂಟಕ್ಕೆ ಮತ್ತೊಂದು ದೊಡ್ಡ ಹೊಡೆತ ಬಿದ್ದಂತಾಗಿದೆ.

ಚೌಧರಿ ಜೊತೆಗಿನ ಫೋಟೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ಅಮಿತ್ ಶಾ, ಎನ್ ಡಿಎ ಕುಟುಂಬಕ್ಕೆ ರಾಷ್ಟ್ರೀಯ ಲೋಕ ದಳ ಅಧ್ಯಕ್ಷ ಜಯಂತ್ ಚೌಧರಿ ಅವರಿಗೆ ಸ್ವಾಗತ, ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಮತ್ತು ಅಮೃತ ಕಾಲದಲ್ಲಿ ದೇಶದ ಅಭಿವೃದ್ಧಿಗಾಗಿ ಬದ್ದವಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.