ಲೋಕಸಭೆ ಟಿಕೆಟ್ ಪಡೆದ ಮರುದಿನವೇ ಬಿಜೆಪಿ ಸಂಸದ ಉಪೇಂದ್ರ ಸಿಂಗ್ ಅವರ ತಿರುಚಿದ ಅಶ್ಲೀಲ ವಿಡಿಯೋ ವೈರಲ್!
ಬಾರಾಬಂಕಿ ಬಿಜೆಪಿ ಸಂಸದ ಉಪೇಂದ್ರ ಸಿಂಗ್ ರಾವತ್ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಉತ್ತರ ಪ್ರದೇಶ: ಬಾರಾಬಂಕಿ ಬಿಜೆಪಿ ಸಂಸದ ಉಪೇಂದ್ರ ಸಿಂಗ್ ರಾವತ್ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಸಂಸದರ ಆಪ್ತ ಕಾರ್ಯದರ್ಶಿ ದಿನೇಶ್ ಚಂದ್ರ ರಾವತ್ ಅವರ ದೂರಿನ ಮೇರೆಗೆ ಅಪರಿಚಿತ ಆರೋಪಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಉಸ್ತುವಾರಿ ಆದಿತ್ಯ ತ್ರಿಪಾಠಿ ತಿಳಿಸಿದ್ದಾರೆ.
ಮುಂಬಲಿರುವ ಲೋಕಸಭಾ ಚುನಾವಣೆಗಾಗಿ ಬಿಜೆಪಿ ಉಪೇಂದ್ರ ಸಿಂಗ್ ರಾವತ್ ಅವರನ್ನು ಬಿಜೆಪಿ ಅಭ್ಯರ್ಥಿ ಎಂದು ಘೋಷಿಸಿದ ಒಂದು ದಿನದ ಬಳಿಕ ಈ ಘಟನೆ ನಡೆದಿದೆ. ಸಂಸದರ ವರ್ಚಸ್ಸನ್ನು ಹಾಳು ಮಾಡಲು ಕೆಲವರು ಅವರ ಆಕ್ಷೇಪಾರ್ಹ ವಿಡಿಯೊವನ್ನು ಹರಿಬಿಟ್ಟಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.
ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವಿಡಿಯೊದಲ್ಲಿ ಪುರುಷನೊಬ್ಬ ಮಹಿಳೆಯೊಂದಿಗೆ ಅಶ್ಲೀಲವಾಗಿ ಕಾಣಿಸಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ವಿಡಿಯೊದಲ್ಲಿರುವ ವ್ಯಕ್ತಿ ಉಪೇಂದ್ರ ಸಿಂಗ್ ರಾವತ್ ಎಂದು ಹೇಳಲಾಗುತ್ತಿದೆ.
ನಾನು ಬಾರಾಬಂಕಿಯಿಂದ ಪಕ್ಷದ ಟಿಕೆಟ್ ಪಡೆದ ತಕ್ಷಣ, ನನ್ನ ವಿರೋಧಿಗಳು ಈ ಕೃತ್ಯ ಎಸಗಿದ್ದಾರೆ ಎಂದು ರಾವತ್ ಆರೋಪಿಸಿದ್ದಾರೆ. ಅಲ್ಲದೇ ಇದು ಸಂಪೂರ್ಣವಾಗಿ ತಿರುಚಿದ ವಿಡಿಯೊ ಎಂದು ಅವರು ಹೇಳಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ, ಬಿಜೆಪಿಯು ಆಗಿನ ಹಾಲಿ ಸಂಸದ ಪ್ರಿಯಾಂಕಾ ಸಿಂಗ್ ರಾವತ್‌ಗೆ ಟಿಕೆಟ್ ನಿರಾಕರಿಸಿ ಉಪೇಂದ್ರ ಸಿಂಗ್ ರಾವತ್ ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



