ಸಮನ್ಸ್ ಕಾನೂನುಬಾಹಿರ, ಇ. ಡಿ ವಿಚಾರಣೆಗೆ ಹಾಜರಾಗಲು ಸಿದ್ಧ ಆದರೆ..: ಅರವಿಂದ್ ಕೇಜ್ರಿವಾಲ್
ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ಮುಂದೆ ಹಾಜರಾಗಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಒಪ್ಪಿಕೊಂಡಿದ್ದಾರೆ.

ನವದೆಹಲಿ: ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ಮುಂದೆ ಹಾಜರಾಗಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಒಪ್ಪಿಕೊಂಡಿದ್ದಾರೆ. ಆದರೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಸಿದ್ಧವಿರುವುದಾಗಿ ತಿಳಿಸಿದ್ದಾರೆ.
ಸಮನ್ಸ್ ನೀಡಿರುವುದು ಅಕ್ರಮವಾಗಿದ್ದರೂ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾ.12ರ ನಂತರ ಜಾರಿ ನಿರ್ದೇಶನಾಲದ ವಿಚಾರಣೆಗೆ ಹಾಜರಾಗುವುದಾಗಿ ದೆಹಲಿ ಮುಖ್ಯಮಂತ್ರಿ ಹೇಳಿದ್ದಾರೆ. ಕಳೆದ ತಿಂಗಳು, ಜಾರಿ ನಿರ್ದೇಶನಾಲಯವು ಕೇಜ್ರಿವಾಲ್‌ಗೆ ಎಂಟನೇ ಸಮನ್ಸ್ ಜಾರಿ ಮಾಡಿದ್ದು, ಮಾರ್ಚ್ 4 ರಂದು (ಸೋಮವಾರ) ವಿಚಾರಣೆಗೆ ಹಾಜರಾಗುವಂತೆ ಕೇಳಿತ್ತು. ಆದಾಗ್ಯೂ, ದೆಹಲಿ ಸರ್ಕಾರವು ತನ್ನ ಬಜೆಟ್ ಅನ್ನು ಇಂದು ವಿಧಾನಸಭೆಯಲ್ಲಿ ಮಂಡಿಸಲಿರುವುದರಿಂದ ಹಾಜರಾಗದಿರಲು ಎಎಪಿ ವರಿಷ್ಠರು ನಿರ್ಧರಿಸಿದ್ದಾರೆ.
ಫೆಬ್ರವರಿ 26 ರಂದು, ಕೇಜ್ರಿವಾಲ್ ಜಾರಿ ನಿರ್ದೇಶನಾಲಯದ ಏಳನೇ ಸಮನ್ಸ್ ಬಿಟ್ಟುಬಿಟ್ಟರು, ಈ ವಿಷಯವು ನ್ಯಾಯಾಲಯದಲ್ಲಿ ಬಾಕಿಯಿದೆ ಮತ್ತು ಮಾರ್ಚ್ 16 ರಂದು ವಿಚಾರಣೆ ನಡೆಯಲಿದೆ ಎಂದು ಎಎಪಿ ಹೇಳಿದೆ.
ದೆಹಲಿ ಮುಖ್ಯಮಂತ್ರಿ ಅವರು ಜಾರಿ ನಿರ್ದೇಶನಾಲಯದ ಎಲ್ಲ ಸಮನ್ಸ್‌ಗಳನ್ನು ಅಕ್ರಮ ಎಂದು ಕರೆದಿದ್ದಾರೆ. ಎಂಟನೇ ಸಮನ್ಸ್‌ಗಳ ಹೊರತಾಗಿ (ಮಾರ್ಚ್ 2 ರಂದು), ಹಿಂದಿನ ಏಳನ್ನು ಫೆಬ್ರವರಿ 26, ಫೆಬ್ರವರಿ 14, ಫೆಬ್ರವರಿ 2, ಜನವರಿ 18, ಜನವರಿ 3, ಡಿಸೆಂಬರ್ 22, 2023 ಮತ್ತು ನವೆಂಬರ್ 2, 2023 ರಂದು ನೀಡಲಾಯಿತು.
ಫೆಬ್ರವರಿ 17 ರಂದು, ದೆಹಲಿ ನ್ಯಾಯಾಲಯವು ಅಬಕಾರಿ ನೀತಿ ಪ್ರಕರಣದಲ್ಲಿ ಐದು ಸಮನ್ಸ್‌ಗಳನ್ನು ಕೈಬಿಟ್ಟಿದ್ದಕ್ಕಾಗಿ ಜಾರಿ ನಿರ್ದೇಶನಾಲಯದ ಇತ್ತೀಚಿನ ದೂರಿಗೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಮಾರ್ಚ್ 16 ರಂದು ದೈಹಿಕವಾಗಿ ಹಾಜರಾಗಲು ಅವಕಾಶ ಮಾಡಿಕೊಟ್ಟಿತು. ಇದರ ಬೆನ್ನಲ್ಲೇ ಮಾರ್ಚ್ 16 ರಂದು ಬೆಳಗ್ಗೆ 10 ಗಂಟೆಗೆ ಕೇಜ್ರಿವಾಲ್ ಅವರು ದೈಹಿಕವಾಗಿ ಹಾಜರಾಗುವಂತೆ ಕೋರ್ಟ್ ನಿಗದಿಪಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



