ಪಶ್ಚಿಮ ಬಂಗಾಳ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಟಿಎಂಸಿ ಹಿರಿಯ ನಾಯಕ ತಪಸ್ ರಾಯ್
ಟಿಎಂಸಿಯ ಹಿರಿಯ ನಾಯಕ ತಪಸ್ ರಾಯ್ ಅವರು ಪಕ್ಷದ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಸೋಮವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕೋಲ್ಕತ್ತಾ: ಲೋಕಸಭೆ ಚುನಾವಣೆಗೆ ಮುನ್ನ ಟಿಎಂಸಿಯ ಹಿರಿಯ ನಾಯಕ ತಪಸ್ ರಾಯ್ ಅವರು ಪಕ್ಷದ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಸೋಮವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವಿಧಾನಸಭಾ ಸ್ಪೀಕರ್‌ಗೆ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ. ನಾನೀಗ ಸ್ವತಂತ್ರ ಹಕ್ಕಿಯಾಗಿದ್ದೇನೆ ಎಂದು ತಪಸ್ ರಾಯ್ ಹೇಳಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ರಾಯ್ ಅವರು, ಜನವರಿಯಲ್ಲಿ ಜಾರಿ ನಿರ್ದೇಶನಾಲಯ(ಇಡಿ) ತಮ್ಮ ನಿವಾಸದ ಮೇಲೆ ದಾಳಿ ನಡೆಸಿದಾಗ ಪಕ್ಷದ ನಾಯಕರು ನನ್ನ ಬೆಂಬಲಕ್ಕೆ ನಿಲ್ಲಲಿಲ್ಲ ಎಂದು ಟೀಕಿಸಿದರು.
ನಾಗರಿಕ ಸಂಸ್ಥೆಗಳಲ್ಲಿ ನಡೆದಿದೆ ಎನ್ನಲಾದ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ತಪಸ್ ರಾಯ್ ಸೇರಿ ಹಲವು ನಾಯಕರ ಮನೆ, ಕಚೇರಿಗಳ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿ ತೀವ್ರ ಶೋಧ ನಡೆಸಿದ್ದರು. ಈ ವೇಳೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬೆಂಬಲಕ್ಕೆ ನಿಂತಿಲ್ಲ. ತಮ್ಮ ಪರವಾಗಿ ಒಂದೇ ಮಾತು ಆಡಿಲ್ಲ. ಇತರ ನಾಯಕರ ಮನೆ ಮೇಲೂ ದಾಳಿ ನಡೆದಿತ್ತು. ಆಗ ಅವರು ಆ ನಾಯಕರ ಪರವಾಗಿ ನಿಂತಿದ್ದರು ಎಂದು ತಪಸ್ ರಾಯ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಿಎಂಸಿ ತೊರೆದಿರುವ ತಪಸ್ ರಾಯ್ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದ್ದು, ಈ ಕುರಿತು ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಏನನ್ನೂ ಹೇಳುವುದಿಲ್ಲ ಎಂದು ಹಾರಿಕೆಯ ಉತ್ತರ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



