ನಕ್ಸಲ್ ಜೊತೆಗಿನ ನಂಟು ಪ್ರಕರಣ: ದೆಹಲಿ ವಿವಿ ಮಾಜಿ ಪ್ರಾಧ್ಯಾಪಕ ಜಿ.ಎನ್. ಸಾಯಿಬಾಬಾ ಖುಲಾಸೆ
ನಕ್ಸಲ್ ನಂಟು ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿ. ಎನ್. ಸಾಯಿಬಾಬಾ ಅವರನ್ನು ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠ ಮಂಗಳವಾರ ಖುಲಾಸೆಗೊಳಿಸಿದೆ.

ನಾಗ್ಪುರ: ಪ್ರಕರಣ ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದ್ದರಿಂದ ನಕ್ಸಲ್ ನಂಟು ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿ. ಎನ್. ಸಾಯಿಬಾಬಾ ಅವರನ್ನು ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠ ಮಂಗಳವಾರ ಖುಲಾಸೆಗೊಳಿಸಿದೆ.
ಇದೇ ವೇಳೆ ಸಾಯಿಬಾಬಾ ಅವರಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನೂ ನ್ಯಾಯಾಲಯ ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ವಿನಯ್ ಜೋಶಿ ಮತ್ತು ವಾಲ್ಮೀಕಿ ಎಸ್‌ಎ ಮೆನೇಜಸ್ ಅವರಿದ್ದ ವಿಭಾಗೀಯ ಪೀಠವು ಪ್ರಕರಣದಲ್ಲಿ ಇತರ ಐವರು ಆರೋಪಿಗಳನ್ನು ಖುಲಾಸೆಗೊಳಿಸಿದೆ.
2017ರಲ್ಲಿ ಪ್ರೊ.ಸಾಯಿಬಾಬಾ (54ವರ್ಷ) ಹಾಗೂ ಇತರ ಐವರನ್ನು ಸೆಷನ್ಸ್ ಕೋರ್ಟ್ ದೋಷಿ ಎಂದು ತೀರ್ಪು ನೀಡಿತ್ತು. 2022ರ ಅಕ್ಟೋಬರ್ 14ರಂದು ವಿಕಲಚೇತನ ಸಾಯಿಬಾಬಾ ಅವರನ್ನು ಹೈಕೋರ್ಟ್ ಖುಲಾಸೆಗೊಳಿಸಿತ್ತು. ಆದರೆ ಸುಪ್ರೀಂಕೋರ್ಟ್ ಖುಲಾಸೆಯನ್ನು ರದ್ದುಗೊಳಿಸಿ, ಮರುವಿಚಾರಣೆ ನಡೆಸುವಂತೆ ಹೈಕೋರ್ಟ್ ಗೆ ನಿರ್ದೇಶನ ನೀಡಿತ್ತು.
ಗಾಲಿ ಕುರ್ಚಿಯಲ್ಲಿ ಓಡಾಡುವ ಸಾಯಿಬಾಬಾ ಪ್ರಸ್ತುತ ನಾಗ್ಪುರ್ ಸೆಂಟ್ರಲ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಮಾವೋವಾದಿಗಳಿಗೆ ದೇಶದ ವಿರುದ್ಧ ಚಟುವಟಿಕೆ ನಡೆಸಲು ಹಣಕಾಸು ನೆರವು ನೀಡಿದ್ದಾರೆಂಬ ಆರೋಪದಲ್ಲಿ ಗಡ್ಚಿರೋಲಿ ಸೆಷನ್ಸ್ ಕೋರ್ಟ್ 2017ರಲ್ಲಿ ಸಾಯಿಬಾಬಾ ಮತ್ತು ಐವರನ್ನು ದೋಷಿ ಎಂದು ತೀರ್ಪು ನೀಡಿ, ಶಿಕ್ಷೆ ವಿಧಿಸಿತ್ತು.
ಸೆಷನ್ಸ್ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಾಯಿಬಾಬಾ ಅವರು ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್, ಸೂಕ್ತ ಸಾಕ್ಷ್ಯಾಧಾರ ಒದಗಿಸಲು ಪ್ರಾಸಿಕ್ಯೂಷನ್ ವಿಫಲವಾದ ಹಿನ್ನೆಲೆಯಲ್ಲಿ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



