ಹಿಮಾಚಲ ಪ್ರದೇಶ: ಅನರ್ಹತೆ ಪ್ರಶ್ನಿಸಿ ಆರು ಕಾಂಗ್ರೆಸ್ ಶಾಸಕರು ಸುಪ್ರೀಂ ಕೋರ್ಟ್‌ಗೆ ಅರ್ಜಿ
ಹಿಮಾಚಲ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ನಂತರ ಅನರ್ಹಗೊಂಡಿರುವ ಆರು ಕಾಂಗ್ರೆಸ್ ಶಾಸಕರು ತಮ್ಮ ಅನರ್ಹತೆಯನ್ನು ಪ್ರಶ್ನಿಸಿ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ನಂತರ ಅನರ್ಹಗೊಂಡಿರುವ ಆರು ಕಾಂಗ್ರೆಸ್ ಶಾಸಕರು ತಮ್ಮ ಅನರ್ಹತೆಯನ್ನು ಪ್ರಶ್ನಿಸಿ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.ಫೆಬ್ರವರಿ 29 ರಂದು ರಾಜ್ಯ ವಿಧಾನಸಭಾ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರ ನಿರ್ಧಾರದ ವಿರುದ್ಧ ಮಾಜಿ ಶಾಸಕರು ಅರ್ಜಿ ಸಲ್ಲಿಸಿದ್ದಾರೆ.
ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿದ ಈ ಕಾಂಗ್ರೆಸ್ ಬಂಡಾಯ ಶಾಸಕರು, ನಂತರ ಪಕ್ಷದ ವಿಪ್ ಉಲ್ಲಂಘಿಸಿ, ಬಜೆಟ್ ವೇಳೆ ಮತದಾನದಿಂದ ದೂರವಿದ್ದರು.ಈ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಅವರನ್ನು ಅನರ್ಹಗೊಳಿಸುವಂತೆ ಕೋರಿತ್ತು.
ರಾಜಿಂದರ್ ರಾಣಾ, ಸುಧೀರ್ ಶರ್ಮಾ, ಇಂದರ್ ದತ್ ಲಖನ್‌ಪಾಲ್, ದೇವಿಂದರ್ ಕುಮಾರ್ ಭೂಟೂ, ರವಿ ಠಾಕೂರ್ ಮತ್ತು ಚೆತನ್ಯ ಶರ್ಮಾ ಅನರ್ಹಗೊಂಡ ಶಾಸಕರಾಗಿದ್ದಾರೆ. ಅವರ ಅನರ್ಹತೆಯ ನಂತರ ಸದನದ ಬಲವು 68 ರಿಂದ 62 ಕ್ಕೆ ಇಳಿದಿದೆ. ಆದರೆ ಕಾಂಗ್ರೆಸ್ ಶಾಸಕರ ಸಂಖ್ಯೆ 40 ರಿಂದ 34 ಕ್ಕೆ ಕುಸಿದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



