ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಹೊಸ ದೂರು ದಾಖಲಿಸಿದ ಇಡಿ
ಹಲವು ಬಾರಿ ಸಮನ್ಸ್ ನೀಡಿದರೂ ವಿಚಾರಣೆಗೆ ಹಾಜರಾಗದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಜಾರಿ ನಿರ್ದೇಶನಾಲಯ(ಇಡಿ) ದೆಹಲಿ ನ್ಯಾಯಾಲಯಕ್ಕೆ ಹೊಸ ದೂರು ಸಲ್ಲಿಸಿದೆ

ನವದೆಹಲಿ: ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಹಲವು ಬಾರಿ ಸಮನ್ಸ್ ನೀಡಿದರೂ ವಿಚಾರಣೆಗೆ ಹಾಜರಾಗದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಜಾರಿ ನಿರ್ದೇಶನಾಲಯ(ಇಡಿ) ದೆಹಲಿ ನ್ಯಾಯಾಲಯಕ್ಕೆ ಹೊಸ ದೂರು ಸಲ್ಲಿಸಿದೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.
ಈ ಹೊಸ ದೂರಿನಲ್ಲಿ ಆಮ್ ಆದ್ಮಿ ಪಕ್ಷದ(ಎಎಪಿ) ರಾಷ್ಟ್ರೀಯ ಸಂಚಾಲಕರಾಗಿರುವ ಅರವಿಂದ್ ಕೇಜ್ರಿವಾಲ್ ಅವರು 4 ರಿಂದ 8 ರವರೆಗಿನ ಸಮನ್ಸ್ಗಳನ್ನು ಗೌರವಿಸಿಲ್ಲ ಎಂದು ಇಡಿ ಆರೋಪಿಸಿದೆ.
ಎಸಿಎಂಎಂ ದಿವ್ಯಾ ಮಲ್ಹೋತ್ರಾ ಅವರ ನ್ಯಾಯಾಲಯ, ಗುರುವಾರ ಈ ಹೊಸ ದೂರಿನ ವಿಚಾರಣೆ ನಡೆಸಲಿದೆ.
ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ತನಿಖೆಯಲ್ಲಿ ಕೇಜ್ರಿವಾಲ್ ಅವರಿಗೆ ನೀಡಲಾದ ಮೊದಲ ಮೂರು ಸಮನ್ಸ್ಗಳಿಗೆ ಹಾಜರಾಗದ ದೆಹಲಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಕೋರಿ ಇಡಿ ಈ ಹಿಂದೆ ಸ್ಥಳೀಯ ನ್ಯಾಯಾಲಯದ ಮೊರೆ ಹೋಗಿತ್ತು. ನ್ಯಾಯಾಲಯ ಮಾರ್ಚ್ 16 ರಂದು ಈ ಪ್ರಕರಣದ ವಿಚಾರಣೆಗೆ ಪಟ್ಟಿ ಮಾಡಿದೆ.
55 ವರ್ಷದ ಕೇಜ್ರಿವಾಲ್ ಅವರು ಇಡಿ ತಮಗೆ ನೀಡಿದ ಎಂಟೂ ಸಮನ್ಸ್ಗಳು 'ಅಕ್ರಮ' ಎಂದು ಹೇಳಿದ್ದಾರೆ ಮತ್ತು ಮಾರ್ಚ್ 12 ರ ನಂತರ ವಿಡಿಯೋ ಕಾನ್ಫರೆನ್ಸ್ ಮೂಲಕ ತಮ್ಮ ವಿಚಾರಣೆ ನಡೆಸಬಹುದು ಎಂದು ಕೇಂದ್ರ ತನಿಖಾ ಸಂಸ್ಥೆಗೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



