ಬಲವಂತವಾಗಿ ಹಿಂದೂ ಹುಡುಗಿಯ ಮತಾಂತರ: ಮುಸ್ಲಿಂ ವ್ಯಕ್ತಿಗೆ ಜೀವಾವಧಿ ಶಿಕ್ಷೆ, 5 ಲಕ್ಷ ರೂ. ದಂಡ ವಿಧಿಸಿದ ಕೋರ್ಟ್
ಹಿಂದೂ ಯುವತಿಯನ್ನು ಬಲವಂತವಾಗಿ ಮತಾಂತರ ಮಾಡಿದ ಆರೋಪ ಪ್ರಕರಣದಲ್ಲಿ ಎಸ್‌ಸಿ/ಎಸ್‌ಟಿ ನ್ಯಾಯಾಲಯ, ಮುಸ್ಲಿಂ ಯುವಕನಿಗೆ ಜೀವಾವಧಿ ಶಿಕ್ಷೆ ಮತ್ತು ಐದು ಲಕ್ಷ ರೂಪಾಯಿ ದಂಡ ವಿಧಿಸಿದೆ.

ಬುಲಂದ್‌ಶಹರ್: ಹಿಂದೂ ಯುವತಿಯನ್ನು ಬಲವಂತವಾಗಿ ಮತಾಂತರ ಮಾಡಿದ ಆರೋಪ ಪ್ರಕರಣದಲ್ಲಿ ಎಸ್‌ಸಿ/ಎಸ್‌ಟಿ ನ್ಯಾಯಾಲಯ, ಮುಸ್ಲಿಂ ಯುವಕನಿಗೆ ಜೀವಾವಧಿ ಶಿಕ್ಷೆ ಮತ್ತು ಐದು ಲಕ್ಷ ರೂಪಾಯಿ ದಂಡ ವಿಧಿಸಿದೆ.
ಧಾರ್ಮಿಕ ಮತಾಂತರ ಕಾಯ್ದೆಯಡಿ ಅನೀಸ್ ಎಂಬ ಮುಸ್ಲಿಂ ವ್ಯಕ್ತಿಯ ವಿರುದ್ಧ ದಾಖಲಾಗಿದ್ದ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಆರೋಪಿ ತಪ್ಪಿತಸ್ಥ ಎಂದು ತೀರ್ಪು ನೀಡಿದೆ.
ಧಾರ್ಮಿಕ ಮತಾಂತರ ಕಾಯ್ದೆಯಡಿ ತಪ್ಪಿತಸ್ಥರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಮೊದಲ ಪ್ರಕರಣ ಇದಾಗಿದೆ.
ಮಾರ್ಚ್ 15, 2022 ರಂದು, ಅನೀಸ್ ವಿರುದ್ಧ ಗುಲಾವತಿ ಪೊಲೀಸ್ ಠಾಣೆಯಲ್ಲಿ ಹಿಂದೂ ಹುಡುಗಿಯನ್ನು ಬಲವಂತವಾಗಿ ಮತಾಂತರ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು.
ಆರಂಭದಲ್ಲಿ ತನ್ನನ್ನು ಆಕಾಶ್ ಎಂದು ಪರಿಚಯಿಸಿಕೊಂಡಿದ್ದ ಅನೀಸ್, ನಂತರ ಹುಡುಗಿಯನ್ನು ಮತಾಂತರಗೊಳಿಸುವಂತೆ ಒತ್ತಾಯಿಸಿ ಮದುವೆಯಾದ ನಂತರ ಆಕೆಯ ಹೆಸರನ್ನು ಆಯೇಶಾ ಎಂದು ಬದಲಾಯಿಸಿದ್ದನು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


