ದೇಶ

ಪಶ್ಚಿಮ ಬಂಗಾಳ: ಲೋಕಸಭೆ ಚುನಾವಣೆಗೂ ಮುನ್ನ ಟಿಎಂಸಿ ಮಾಜಿ ನಾಯಕ ತಪಸ್ ರಾಯ್ ಬಿಜೆಪಿ ಸೇರ್ಪಡೆ

ಇತ್ತೀಚಿಗಷ್ಟೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ತೃಣಮೂಲ ಕಾಂಗ್ರೆಸ್(ಟಿಎಂಸಿ) ಮಾಜಿ ನಾಯಕ ತಪಸ್ ರಾಯ್ ಅವರು ಬುಧವಾರ ಭಾರತೀಯ ಜನತಾ ಪಕ್ಷ(ಬಿಜೆಪಿ)ಕ್ಕೆ ಸೇರಿದ್ದಾರೆ.

ಪಶ್ಚಿಮ ಬಂಗಾಳ: ಲೋಕಸಭೆ ಚುನಾವಣೆಗೂ ಮುನ್ನ ಟಿಎಂಸಿ ಮಾಜಿ ನಾಯಕ ತಪಸ್ ರಾಯ್ ಬಿಜೆಪಿ ಸೇರ್ಪಡೆ
ತಪಸ್ ರಾಯ್
Published On :

ಕೋಲ್ಕತ್ತಾ: ಇತ್ತೀಚಿಗಷ್ಟೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ತೃಣಮೂಲ ಕಾಂಗ್ರೆಸ್(ಟಿಎಂಸಿ) ಮಾಜಿ ನಾಯಕ ತಪಸ್ ರಾಯ್ ಅವರು ಬುಧವಾರ ಭಾರತೀಯ ಜನತಾ ಪಕ್ಷ(ಬಿಜೆಪಿ)ಕ್ಕೆ ಸೇರಿದ್ದಾರೆ.

ಟಿಎಂಸಿಯ ಹಿರಿಯ ನಾಯಕ ತಪಸ್ ರಾಯ್ ಅವರು ಕಳೆದ ಸೋಮವಾರ ಪಕ್ಷದ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಶಾಸಕ ಸ್ಥಾನಕ್ಕೆ ಮತ್ತು ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.

ಇಂದು ಕೋಲ್ಕತ್ತಾದಲ್ಲಿ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಸಮ್ಮುಖದಲ್ಲಿ ತಪಸ್ ರಾಯ್ ಅವರು ಕೇಸರಿ ಪಕ್ಷ ಸೇರಿದರು.

ಟಿಎಂಸಿಗೆ ರಾಜೀನಾಮೆ ನೀಡುವ ಮುನ್ನ ರಾಯ್ ಅವರು, ಪಶ್ಚಿಮ ಬಂಗಾಳ ಸರ್ಕಾರ ಸಂದೇಶಖಾಲಿ ಪ್ರಕರಣವನ್ನು ನಿರ್ವಹಿಸಿದ ರೀತಿಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.