ಅಕ್ರಮ ಹಣ ವರ್ಗಾವಣೆ ಪ್ರಕರಣ: ಎಸ್ ಪಿ ಶಾಸಕ ಇರ್ಫಾನ್ ಸೋಲಂಕಿ ಮನೆ ಮೇಲೆ ಇಡಿ ದಾಳಿ
ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಸಮಾಜವಾದಿ ಪಕ್ಷದ ಶಾಸಕ ಇರ್ಫಾನ್ ಸೋಲಂಕಿ ಹಾಗೂ ಅವರ ಕುಟುಂಬ ಸದಸ್ಯರಿಗೆ ಸೇರಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಲಕ್ನೊ: ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಸಮಾಜವಾದಿ ಪಕ್ಷದ ಶಾಸಕ ಇರ್ಫಾನ್ ಸೋಲಂಕಿ ಹಾಗೂ ಅವರ ಕುಟುಂಬ ಸದಸ್ಯರಿಗೆ ಸೇರಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಸೋಲಂಕಿ (44) ಅವರು ಪ್ರಸ್ತುತ ಮಹಾರಾಜ್‌ಗಂಜ್ ಜೈಲಿನಲ್ಲಿದ್ದಾರೆ ಮತ್ತು ಸಿಸಾಮೌ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿದ್ದಾರೆ. ಹಲವು ಕ್ರಿಮಿನಲ್ ಪ್ರಕರಣಗಳ ಸಂಬಂಧ 2022ರ ಡಿಸೆಂಬರ್‌ನಿಂದ ಮಹಾರಾಜಗಂಗ್ ಜೈಲಿನಲ್ಲಿದ್ದಾರೆ. ಭೂಮಿ ಕಸಿದುಕೊಳ್ಳಲು ಮಹಿಳೆಯೊಬ್ಬರ ಮೇಲೆ ದೌರ್ಜನ್ಯ ನಡೆಸಿ, ಅವರ ಮನೆಯನ್ನು ಸೋಲಂಕಿ ಹಾಗೂ ಅವರ ಸಹೋದರ ಸೇರಿ ಸುಟ್ಟು ಹಾಕಿದ್ದರು. ಬಳಿಕ ಪೊಲೀಸರಿಗೆ ಶರಣಾಗಿದ್ದರು. ಬಳಿಕ ಉತ್ತರ ಪ್ರದೇಶ ಗ್ಯಾಂಗ್‌ಸ್ಟರ್ಸ್ ಹಾಗೂ ಸಮಾಜ ಘಾತುಕ ಚಟುವಟಿಕೆ (ನಿಯಂತ್ರಣ) ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಜೈಲಿನಲ್ಲಿರುವ ಕಾನ್ಪುರ ಸಮಾಜವಾದಿ ಪಕ್ಷದ ಶಾಸಕ ಇರ್ಫಾನ್ ಸೋಲಂಕಿ ಮತ್ತು ಅವರ ಸಂಬಂಧಿಕರ ಮನೆ ಮೇಲೆ ಇಡಿ ತಂಡ ಗುರುವಾರ ಮುಂಜಾನೆ ದಾಳಿ ನಡೆಸಿದೆ. ಇಡಿ ತಂಡ ಎಲ್ಲರ ಮೊಬೈಲ್ ಫೋನ್ ಗಳನ್ನು ಜಪ್ತಿ ಮಾಡಿದ್ದು, ಸಿಸಿಟಿವಿ ಸಂಪರ್ಕವನ್ನೂ ಕಡಿತಗೊಳಿಸಿದೆ.
ಮಹಾರಾಜಗಂಜ್ ಜೈಲಿನಲ್ಲಿರುವ ಸಮಾಜವಾದಿ ಪಕ್ಷದ ಶಾಸಕ ಇರ್ಫಾನ್ ಸೋಲಂಕಿ ಅವರ ಸಮಸ್ಯೆಗಳು ಹೆಚ್ಚಾಗುತ್ತಿರುವುದು ಗಮನಾರ್ಹ. ನಕಲಿ ಆಧಾರ್ ಕಾರ್ಡ್ ಪ್ರಕರಣದಲ್ಲಿ ಶಾಸಕರ ವಿರುದ್ಧ ಆರೋಪ ಮಾಡಲಾಗಿದೆ.
ಕಾನ್ಪುರದ ಸಂಸದ-ಶಾಸಕ ಕೆಳ ನ್ಯಾಯಾಲಯವು ಶಾಸಕ ಮತ್ತು ಅವರ ಇಬ್ಬರು ಸೋದರ ಮಾವ ಸೇರಿದಂತೆ ಏಳು ಮಂದಿ ವಿರುದ್ಧ ಆರೋಪಗಳನ್ನು ರೂಪಿಸಿದೆ. ಈಗ ಈ ಪ್ರಕರಣದ ಮುಂದಿನ ವಿಚಾರಣೆ ಮಾರ್ಚ್ 18 ರಂದು ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



