ಸಿಬಿಐ ಡಿಐಜಿಯಾಗಿ ಐಪಿಎಸ್ ಅಧಿಕಾರಿ ನೇಮಕ
ಹಿರಿಯ ಐಪಿಎಸ್ ಅಧಿಕಾರಿ ಸಾರಾ ಶರ್ಮಾ ಅವರನ್ನು ಸಿಬಿಐ ಉಪ ಮಹಾನಿರ್ದೇಶಕರನ್ನಾಗಿ (ಡಿಐಜಿ) ನೇಮಿಸಿ ಕೇಂದ್ರ ಸಿಬ್ಬಂದಿ ಸಚಿವಾಲಯದ ಶುಕ್ರವಾರ ಆದೇಶ ಹೊರಡಿಸಿದೆ.

ನವದೆಹಲಿ: ಹಿರಿಯ ಐಪಿಎಸ್ ಅಧಿಕಾರಿ ಸಾರಾ ಶರ್ಮಾ ಅವರನ್ನು ಸಿಬಿಐ ಉಪ ಮಹಾನಿರ್ದೇಶಕರನ್ನಾಗಿ (ಡಿಐಜಿ) ನೇಮಿಸಿ ಕೇಂದ್ರ ಸಿಬ್ಬಂದಿ ಸಚಿವಾಲಯದ ಶುಕ್ರವಾರ ಆದೇಶ ಹೊರಡಿಸಿದೆ.
ಶರ್ಮಾ ಅವರು ಒಡಿಶಾ ಕೇಡರ್‌ನ 2010-ಬ್ಯಾಚ್‌ನ ಭಾರತೀಯ ಪೊಲೀಸ್ ಸೇವೆ (IPS) ಅಧಿಕಾರಿಯಾಗಿದ್ದಾರೆ. ಅವರು ಐದು ವರ್ಷಗಳ ಕಾಲ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಡಿಐಜಿಯಾಗಿ ಸೇರ್ಪಡೆಗೊಂಡಿದ್ದಾರೆ ಎಂದು ಆದೇಶದಲ್ಲಿ ಹೇಳಲಾಗಿದೆ.
ತನಿಖಾ ಸಂಸ್ಥೆಯಲ್ಲಿರುವ ಇಬ್ಬರು ಹಿರಿಯ ಅಧಿಕಾರಿಗಳ ಅಧಿಕಾರಾವಧಿ ವಿಸ್ತರಣೆಗೂ ಅನುಮೋದನೆ ನೀಡಲಾಗಿದೆ. ಮತ್ತೊಂದು ಮೂಲದ ಪ್ರಕಾರ ಡಿಐಜಿ ಪಿ. ಮುರುಗನ್ ಅವರ ಅಧಿಕಾರಾವಧಿಯನ್ನು ಮಾರ್ಚ್ 15, 2027 ರವರೆಗೆ ವಿಸ್ತರಿಸಲಾಗಿದೆ. ಪ್ರಸ್ತುತ ತನಿಖಾ ಸಂಸ್ಥೆಯಲ್ಲಿ ಪೊಲೀಸ್ ಸೂಪರಿಂಟೆಂಡೆಂಟ್ ಆಗಿರುವ ವಿದ್ಯುತ್ ವಿಕಾಶ್ ಅವರ ಅವಧಿಯನ್ನು ಫೆಬ್ರವರಿ 18, 2025 ರವರೆಗೆ ವಿಸ್ತರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


