Women's day: ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್ ದರ 100 ರೂ. ಇಳಿಕೆ: ಮಹಿಳೆಯರಿಗೆ ಪ್ರಧಾನಿ ಮೋದಿ ಗಿಫ್ಟ್
ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆ ಮಾಡುವ ಮೂಲಕ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಮಹಿಳೆಯಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉಡುಗೊರೆಯನ್ನು ನೀಡಿದ್ದಾರೆ.

ನವದೆಹಲಿ: ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆ ಮಾಡುವ ಮೂಲಕ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಮಹಿಳೆಯಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉಡುಗೊರೆಯನ್ನು ನೀಡಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪ್ರಧಾನಿ ಮೋದಿಯವರು ಈ ಘೋಷಣೆಯನ್ನು ಮಾಡಿದ್ದಾರೆ. ದೇಶದ ಮಹಿಳೆಯರ ಸಬಲೀಕರಣದ ನಿಟ್ಟಿನಲ್ಲಿ ನಮ್ಮ ಬದ್ಧತೆಗೆ ಪೂರಕವಾಗಿ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ.
‘ಇಂದು, ಮಹಿಳಾ ದಿನದಂದು, ನಮ್ಮ ಸರ್ಕಾರವು ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 100 ರೂ. ಕಡಿಮೆ ಮಾಡುತ್ತಿದೆ. ಇದು ದೇಶದಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲೆ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಲಿದೆ. ಈ ನಿರ್ಧಾರವು ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡಲಿದೆ.
ಅಡುಗೆ ಅನಿಲವನ್ನು ಕೈಗೆಟುಕುವ ದರದಲ್ಲಿ ಸಿಗುವಂತೆ ಮಾಡುವ ಮೂಲಕ ನಾವು ಕುಟುಂಬಗಳ ಯೋಗಕ್ಷೇಮವನ್ನು ನೋಡಿಕೊಳ್ಳುತ್ತೇವೆ. ಜೊತೆಗೆ, ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದ್ದೇವೆ.
ಈ ನಿರ್ಧಾರವು ಮಹಿಳೆಯರನ್ನು ಸಬಲೀಕರಣಗೊಳಿಸುವ ಮತ್ತು ಅವರ ಬದುಕನ್ನು ಸುಲಭಗೊಳಿಸುವುದನ್ನು ಖಾತರಿಪಡಿಸಿಕೊಳ್ಳುವ ನಮ್ಮ ಬದ್ಧತೆಗೆ ಪೂರಕವಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


