Women's day: ಇನ್ಪೋಸಿಸ್ ಫೌಂಡೇಶನ್ ಮಾಜಿ ಅಧ್ಯಕ್ಷೆ ಡಾ. ಸುಧಾಮೂರ್ತಿ ರಾಜ್ಯಸಭೆಗೆ ನಾಮನಿರ್ದೇಶನ
ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಡಾ ಸುಧಾಮೂರ್ತಿಯವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ

ನವದೆಹಲಿ: ಮಹಿಳಾ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಮಹಿಳಾ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇನ್ಫೋಸಿಸ್ ಫೌಂಡೇಶನ್ ಮಾಜಿ ಅಧ್ಯಕ್ಷೆ, ಸಮಾಜಸೇವಕಿ, ಲೇಖಕಿ ಡಾ ಸುಧಾಮೂರ್ತಿ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದಾರೆ.
ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಡಾ ಸುಧಾಮೂರ್ತಿಯವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಖುಷಿಯ ವಿಚಾರವನ್ನು ಹಂಚಿಕೊಂಡಿರುವ ಅವರು, "ಭಾರತದ ರಾಷ್ಟ್ರಪತಿಗಳು ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಖುಷಿ ತಂದಿದೆ. ಸಮಾಜಸೇವೆ, ಲೋಕೋಪಕಾರಿ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾಮೂರ್ತಿಯವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮ್ಮ 'ಪ್ರಬಲ ಸಾಕ್ಷಿಯಾಗಿದೆ. ನಾರಿ ಶಕ್ತಿ', ನಮ್ಮ ದೇಶದ ಭವಿಷ್ಯ ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯವನ್ನು ಉದಾಹರಿಸುತ್ತದೆ. ರಾಜ್ಯಸಭೆ ಸದಸ್ಯೆಯಾಗಿ ಅವರ ಮುಂದಿನ ಪಯಣ ಶುಭಕರವಾಗಿರಲಿ." ಎಂದು ಆಶಯ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



