ದೇಶ

ಮಹಾರಾಷ್ಟ್ರ: ಧಾರ್ಮಿಕ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿದ 200 ಮಂದಿ ಅಸ್ವಸ್ಥ!

ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಆಹಾರ ಸೇವಿಸಿದ ಸುಮಾರು 200 ಮಂದಿ ಅಸ್ವಸ್ಥರಾಗಿರುವ ಘಟನೆ ಎಂದು ಮಹಾರಾಷ್ಟ್ರದ ಲಾತೂರ್‌ನಲ್ಲಿ ನಡೆದಿದೆ


ಮಹಾರಾಷ್ಟ್ರ: ಧಾರ್ಮಿಕ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿದ 200 ಮಂದಿ ಅಸ್ವಸ್ಥ!
ಸಾಂದರ್ಭಿಕ ಚಿತ್ರ
Published On :

ಲಾತೂರ್: ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಆಹಾರ ಸೇವಿಸಿದ ಸುಮಾರು 200 ಮಂದಿ ಅಸ್ವಸ್ಥರಾಗಿರುವ ಘಟನೆ ಎಂದು ಮಹಾರಾಷ್ಟ್ರದ ಲಾತೂರ್‌ನಲ್ಲಿ ನಡೆದಿದೆ. ಗುರುವಾರ ರಾತ್ರಿ ಡಿಯೋನಿ ತಹಸಿಲ್‌ನ ವಾಘನಲ್ವಾಡಿಯಲ್ಲಿ ನಡೆದ 'ಹರಿನಾಮ ಸಪ್ತಾಹ' ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

"ಗುರುವಾರ ಏಕಾದಶಿಯಾದ್ದರಿಂದ ಸಂಜೆ 5 ಗಂಟೆಗೆ 'ಭಾಗರ್' (ಬಾರ್ನ್ಯಾರ್ಡ್ ರಾಗಿಯಿಂದ ತಯಾರಿಸಿದ ಆಹಾರ )ಬಡಿಸಲಾಗಿದೆ. ಮಧ್ಯರಾತ್ರಿಯ ಹೊತ್ತಿಗೆ ಸುಮಾರು 200 ಜನರಲ್ಲಿ ಅಸ್ವಸ್ಥತೆ ಕಾಣಿಸಿಕೊಂಡಿದೆ. ಅವರಲ್ಲಿ ಹಲವರು ವಾಂತಿ ಮಾಡಿಕೊಂಡಿದ್ದಾರೆ. ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಕೆಲವರಿಗೆ ಪ್ರಾಥಮಿಕ ಆರೋಗ್ಯಕೇಂದ್ರದಲ್ಲಿ, ಮತ್ತೆ ಕೆಲವರಿಗೆ ದೇವಸ್ಥಾನದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ

ಸದ್ಯ ಪರಿಸ್ಥಿತಿಯನ್ನು ನಿಯಂತ್ರಿಸಲಾಗಿದ್ದು, ಯಾರೂ ಚಿಂತಾಜನಕವಾಗಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ವಿ.ವಡಗಾವೆ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.