ದೇಶ

ಭೋಪಾಲ: ರಾಜ್ಯ ಸಚಿವಾಲಯ 'ವಲ್ಲಭ ಭವನ'ದಲ್ಲಿ ಬೆಂಕಿ ಅವಘಡ

ಮಧ್ಯ ಪ್ರದೇಶ ರಾಜಧಾನಿ ಭೋಪಾಲ್ ನಲ್ಲಿರುವ ರಾಜ್ಯ ಸಚಿವಾಲಯ ವಲ್ಲಭ ಭವನದಲ್ಲಿ ಶನಿವಾರ ಬೆಳಗ್ಗೆ ಬೃಹತ್ ಪ್ರಮಾಣದ ಬೆಂಕಿ ಅವಘಡ ಸಂಭವಿಸಿದೆ.

ಭೋಪಾಲ: ರಾಜ್ಯ ಸಚಿವಾಲಯ 'ವಲ್ಲಭ ಭವನ'ದಲ್ಲಿ ಬೆಂಕಿ ಅವಘಡ
ರಾಜ್ಯ ಸಚಿವಾಲಯದಲ್ಲಿ ಬೆಂಕಿ
Published On :

ಭೋಪಾಲ್ : ಮಧ್ಯ ಪ್ರದೇಶದ ರಾಜಧಾನಿ ಭೋಪಾಲ್​ನಲ್ಲಿರುವ ರಾಜ್ಯ ಸಚಿವಾಲಯದಲ್ಲಿ (State Secretariat) ಶನಿವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಸಚಿವಾಲಯ ಕಟ್ಟಡ ವಲ್ಲಭ ಭವನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹಲವು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದವು.

ಮುಖ್ಯಮಂತ್ರಿ ಸೇರಿದಂತೆ ಹಲವು ಮಂದಿ ಸಚಿವರ ಕಚೇರಿಗಳೂ ಇಲ್ಲಿವೆ. ಕಟ್ಟಡದ ಐದನೇ ಮಹಡಿಯಲ್ಲಿ ಮುಖ್ಯಮಂತ್ರಿ ಕಚೇರಿ ಇದೆ. ಸದ್ಯ ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ.

ಬೆಂಕಿ ಅವಘಡದ ಕಾರಣ ಹಲವು ಮಹತ್ವದ ದಾಖಲೆಗಳು ಸುಟ್ಟು ಭಸ್ಮವಾಗಿವೆ ಎಂದು ಹೇಳಲಾಗುತ್ತಿದೆ. ಒಳಗೆ ಐದು ಮಂದಿ ಸಿಲುಕಿರುವ ಬಗ್ಗೆ ವರದಿಯಾಗಿದೆ. ಬೆಂಕಿ ಅವಘಡದ ಬಗ್ಗೆ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ. ಬೆಂಕಿ ನಂದಿಸುವ ಕಾರ್ಯ ಇನ್ನೂ ನಡೆಯುತ್ತಿದೆ. ಸದ್ಯ ಅಗ್ನಿ ಸುರಕ್ಷತಾ ತಜ್ಞ ಪಂಕಜ್ ಖರೆ ಕೂಡ ಸ್ಥಳದಲ್ಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.