ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಸುರೇಶ್ ಪಚೌರಿ ಬಿಜೆಪಿಗೆ ಸೇರ್ಪಡೆ
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆ ಅಘಾತ ಉಂಟಾಗಿದ್ದು, ಮಾಜಿ ಕೇಂದ್ರ ಸಚಿವ ಸುರೇಶ್ ಪಚೌರಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಭೋಪಾಲ್: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆ ಅಘಾತ ಉಂಟಾಗಿದ್ದು, ಮಾಜಿ ಕೇಂದ್ರ ಸಚಿವ ಸುರೇಶ್ ಪಚೌರಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಪಚೌರಿ ಜೊತೆಗೆ ಮಾಜಿ ಸಂಸದ ಗಜೇಂದ್ರ ಸಿಂಗ್ ರಾಜುಖೇದಿ ಹಾಗೂ ಇನ್ನಿತರ ಮಾಜಿ ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್, ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ಈ ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಈ ಬೆಳವಣಿಗೆ ಸಂಭವಿಸಿರುವುದು ಕಾಂಗ್ರೆಸ್ ಗೆ ದೊಡ್ಡ ಹಿನ್ನಡೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಮಾಜಿ ಶಾಸಕರಾದ ಸಂಜಯ್ ಶುಕ್ಲಾ, ಅರ್ಜುನ್ ಪಾಲಯ್ಯ, ವಿಶಾಲ್ ಪಟೇಲ್ ಅವರು ಬಿಜೆಪಿ ಸೇರ್ಪಡೆಗೊಂಡ ನಾಯಕರ ಪಟ್ಟಿಯಲ್ಲಿದ್ದಾರೆ. ಪಚೌರಿ ಅವರನ್ನು ಗಾಂಧಿ ಕುಟುಂಬದ ಆಪ್ತ ಎಂದೇ ಗುರುತಿಸಲಾಗಿತ್ತು, ರಕ್ಷಣಾ ಖಾತೆ ರಾಜ್ಯ ಸಚಿವರಾಗಿ, ನಾಲ್ಕು ಅವಧಿಗೆ ರಾಜ್ಯಸಭಾ ಸದಸ್ಯರಾಗಿ ಪಚೌರಿ ಕಾರ್ಯನಿರ್ವಹಿಸಿದ್ದರು.
ಪಚೌರಿ ಈ ಹಿಂದೆ ಕಾಂಗ್ರೆಸ್‌ನ ಮಧ್ಯಪ್ರದೇಶ ಘಟಕದ ಅಧ್ಯಕ್ಷ ಹುದ್ದೆ ಸೇರಿದಂತೆ ಹಲವು ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದರು. ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷರೂ ಆಗಿದ್ದರು.
ಪ್ರಮುಖ ಬುಡಕಟ್ಟು ನಾಯಕರಾದ ರಾಜುಖೇಡಿ ಅವರು 1998, 1999 ಮತ್ತು 2009 ರ ಮೂರು ಅವಧಿಗೆ ಕಾಂಗ್ರೆಸ್ ಟಿಕೆಟ್‌ನಲ್ಲಿ ಧಾರ್ (ಪರಿಶಿಷ್ಟ ಬುಡಕಟ್ಟುಗಳು) ಲೋಕಸಭಾ ಸ್ಥಾನದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಕಾಂಗ್ರೆಸ್‌ಗೆ ಸೇರುವ ಮೊದಲು ಅವರು 1990 ರಲ್ಲಿ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




