ದೇಶ

ಹರ್ಯಾಣ: ನಿಂತಿದ್ದ ವಾಹನಕ್ಕೆ ಕಾರು ಡಿಕ್ಕಿ, ಸ್ಥಳದಲ್ಲೇ 6 ಸಾವು, 6 ಮಂದಿಗೆ ಗಾಯ

ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಹಿಂದಿನಿಂದ ಬಂದ ಎಕ್ಸ್‌ಯುವಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹರಿಯಾಣದ ರೇವಾರಿಯಲ್ಲಿ ನಡೆದಿದೆ.

ಹರ್ಯಾಣ: ನಿಂತಿದ್ದ ವಾಹನಕ್ಕೆ ಕಾರು ಡಿಕ್ಕಿ, ಸ್ಥಳದಲ್ಲೇ 6 ಸಾವು, 6 ಮಂದಿಗೆ ಗಾಯ
ಸಾಂದರ್ಭಿಕ ಚಿತ್ರ
Published On :

ಚಂಡೀಗಢ: ಪಂಕ್ಚರ್ ಆಗಿ ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಹಿಂದಿನಿಂದ ಬಂದ ಎಕ್ಸ್‌ಯುವಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹರಿಯಾಣದ ರೇವಾರಿಯಲ್ಲಿ ನಡೆದಿದೆ.

ಖಾರ್ಖರಾ ಗ್ರಾಮದ ಬಳಿ ಬಳಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಮಹಿಳೆಯರು ಮತ್ತು ಇಬ್ಬರು ಪುರುಷರು ಸಾವಿಗೀಡಾಗಿದ್ದಾರೆ. ಟೈರ್ ಪಂಕ್ಚರ್ ಆಗಿದ್ದರಿಂದ ಕಾರನ್ನು ರಸ್ತೆ ಬದಿ ನಿಲ್ಲಿಸಲಾಗಿತ್ತು.

ಖಾರ್ಖರಾ ಗ್ರಾಮದ ಬಳಿ ಎಕ್ಸ್‌ಯುವಿಯಲ್ಲಿದ್ದವರು ತಮ್ಮ ವಾಹನದ ಟೈರ್‌ಗಳನ್ನು ಬದಲಾಯಿಸುತ್ತಿದ್ದಾಗ ಈ ಘಟನೆ ನಡೆದಿದೆ. ಹಿಂದಿನಿಂದ ಬಂದ ಮತ್ತೊಂದು ಕಾರು ಜನರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಕಾರು ಖಟೂ ಗ್ರಾಮದಿಂದ ದೆಹಲಿಗೆ ಹಿಂತಿರುಗುತ್ತಿತ್ತು.

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತರ ಮರಣೋತ್ತರ ಪರೀಕ್ಷೆ ವರದಿ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.