ಉತ್ತರ ಪ್ರದೇಶ: ಹೈವೋಲ್ಟೇಜ್ ತಂತಿ ತಗುಲಿ ಬಸ್ ಗೆ ಬೆಂಕಿ, ಐವರು ಸಾವು 11 ಮಂದಿಗೆ ಗಾಯ
ಉತ್ತರ ಪ್ರದೇಶದ ಗಾಜಿಪುರದಲ್ಲಿ ಸೋಮವಾರ ಹೈವೋಲ್ಟೇಜ್ ವಿದ್ಯುತ್ ತಂತಿ ತಗುಲಿ ಬಸ್ ಗೆ ಬೆಂಕಿ ಹೊತ್ತಿಕೊಂಡಿದ್ದು, ಘಟನೆಯಲ್ಲಿ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ

ಗಾಜಿಪುರ: ಉತ್ತರ ಪ್ರದೇಶದ ಗಾಜಿಪುರದಲ್ಲಿ ಸೋಮವಾರ ಹೈವೋಲ್ಟೇಜ್ ವಿದ್ಯುತ್ ತಂತಿ ತಗುಲಿ ಬಸ್ ಗೆ ಬೆಂಕಿ ಹೊತ್ತಿಕೊಂಡಿದ್ದು, ಘಟನೆಯಲ್ಲಿ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ ಮತ್ತು 11 ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುಟುಂಬವೊಂದು ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಮೌವಿನಿಂದ ಮರ್ದಾ ಪೊಲೀಸ್ ಠಾಣೆ ವ್ಯಾಪ್ತಿಯ ಮಹಾಹರ್ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಎಸ್‌ಎಚ್‌ಒ ಧರ್ಮೇಂದ್ರ ಕುಮಾರ್ ಪಾಂಡೆ ಅವರು ಪಿಟಿಐಗೆ ತಿಳಿಸಿದ್ದಾರೆ.
ಬಸ್ ಗೆ ಹೈ-ಟೆನ್ಷನ್ ಎಲೆಕ್ಟ್ರಿಕ್ ಲೈನ್ ತಗುಲಿ ಬೆಂಕಿ ಹೊತ್ತಿಕೊಂಡಿದೆ. ಸ್ಥಳದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಎಂದು ಪಾಂಡೆ ಹೇಳಿದ್ದಾರೆ.
ಘಟನೆ ಬಗ್ಗೆ ತೀವ್ರ ಸಂತಾಪ ಸೂಚಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ 50,000 ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
"ಗಾಜಿಪುರ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತ ಅತ್ಯಂತ ದುಃಖಕರ ಮತ್ತು ಹೃದಯ ವಿದ್ರಾವಕವಾಗಿದೆ. ದುಃಖತಪ್ತ ಕುಟುಂಬಗಳೊಂದಿಗೆ ನಾವು ಇರುತ್ತೇವೆ. ಅಗಲಿದ ಆತ್ಮಗಳಿಗೆ ಶಾಂತಿ ಸಿಗಲಿ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ" ಎಂದು ಆದಿತ್ಯನಾಥ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



