UAPA Act: ಜಮ್ಮು-ಕಾಶ್ಮೀರ ನ್ಯಾಷನಲ್ ಫ್ರಂಟ್ ಸಂಘಟನೆಗೆ ಕೇಂದ್ರ ಸರ್ಕಾರ 5 ವರ್ಷ ನಿಷೇಧ!
ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ನಯೀಮ್ ಅಹ್ಮದ್ ಖಾನ್ ನೇತೃತ್ವದ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಫ್ರಂಟ್ ಸಂಘಟನೆಯನ್ನು 5 ವರ್ಷದ ಕಾಲ ಕೇಂದ್ರ ಗೃಹ ಸಚಿವಾಲಯ ನಿಷೇಧಿಸಿದೆ.

ನವದೆಹಲಿ: ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ನಯೀಮ್ ಅಹ್ಮದ್ ಖಾನ್ ನೇತೃತ್ವದ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಫ್ರಂಟ್ ಸಂಘಟನೆಯನ್ನು 5 ವರ್ಷದ ಕಾಲ ಕೇಂದ್ರ ಗೃಹ ಸಚಿವಾಲಯ ನಿಷೇಧಿಸಿದೆ.
ಹುರಿಯತ್ ಕಾನ್ಫರೆನ್ಸ್‌ನ ಅಂಗ ಸಂಸ್ಥೆ JKNF ಅನ್ನು ತಕ್ಷಣವೇ ಜಾರಿಗೆ ಬರುವಂತೆ "ಕಾನೂನುಬಾಹಿರ ಸಂಘ" ಎಂದು ಕೇಂದ್ರ ಗೃಹ ಸಚಿವಾಲಯವು ಘೋಷಿಸಿದೆ. JKNF ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. ಇದು ದೇಶದ ಸಮಗ್ರತೆ, ಸಾರ್ವಭೌಮತೆ ಮತ್ತು ಭದ್ರತೆಗೆ ಹಾನಿಕರವಾಗಿದೆ ಎಂದು ಸರ್ಕಾರ ಹೇಳಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದವನ್ನು ಉತ್ತೇಜಿಸುವ ಮೂಲಕ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಭಯೋತ್ಪಾದಕರಿಗೆ ಲಾಜಿಸ್ಟಿಕ್ಸ್ ಬೆಂಬಲವನ್ನು ನೀಡುವ ಮೂಲಕ ಭಯೋತ್ಪಾದಕ ಚಟುವಟಿಕೆಗಳು ಮತ್ತು ಭಾರತ ವಿರೋಧಿ ಪ್ರಚಾರವನ್ನು ಬೆಂಬಲಿಸುವಲ್ಲಿ JKNF ಸದಸ್ಯರು ತೊಡಗಿಸಿಕೊಂಡಿದ್ದಾರೆ ಎಂದು ಸಚಿವಾಲಯ ಹೇಳಿದೆ.
JKNF ಸದಸ್ಯರು 'ಕಾಶ್ಮೀರದ ವಿವಿಧ ಭಾಗಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುವುದು, ಭದ್ರತಾ ಪಡೆಗಳ ಮೇಲೆ ಆಗಾಗ್ಗೆ ಕಲ್ಲು ತೂರಾಟ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಲು ಹಿಂಸಾತ್ಮಕ ಪ್ರತಿಭಟನಾಕಾರರನ್ನು ಸಂಘಟಿಸುವಲ್ಲಿ ತೊಡಗಿಸಿಕೊಂಡಿದ್ದಾರೆ' ಹೀಗಾಗಿ ಈ ಸಂಘಟನೆಯನ್ನು ಐದು ವರ್ಷಗಳ ಕಾಲ ನಿಷೇಧಿಸಲಾಗಿದೆ ಎಂದು ಸಚಿವಾಲಯ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



