ಹರಿಯಾಣ ರಾಜ್ಯಪಾಲರನ್ನು ಭೇಟಿ ಮಾಡಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸೈನಿ
ನಯಾಬ್ ಸಿಂಗ್ ಸೈನಿ ಅವರು ಮಂಗಳವಾರ ರಾಜ್ಯಪಾಲರನ್ನು ಭೇಟಿ ಮಾಡಿ, ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

ಚಂಡೀಗಢ: ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಹರಿಯಾಣದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಕುರುಕ್ಷೇತ್ರದ ಸಂಸದ ನಯಾಬ್ ಸಿಂಗ್ ಸೈನಿ ಅವರು ಮಂಗಳವಾರ ರಾಜ್ಯಪಾಲರನ್ನು ಭೇಟಿ ಮಾಡಿ, ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.
ಸೈನಿ ಅವರು ಇಂದು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾದ ಮಧ್ಯಾಹ್ನ ರಾಜಭವನಕ್ಕೆ ತೆರಳಿ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರನ್ನು ಭೇಟಿ ಮಾಡಿ, ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.
ಕೇಂದ್ರ ಸಚಿವ ಅರ್ಜುನ್ ಮುಂಡಾ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್, ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮತ್ತು ಹರಿಯಾಣ ಬಿಜೆಪಿ ಉಸ್ತುವಾರಿ ಬಿಪ್ಲಬ್ ದೇಬ್ ಅವರು ಸೈನಿ ಸಾಥ್ ನೀಡಿದರು.
ಇಂದು ಸಂಜೆ ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸೈನಿ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಲೋಕಸಭೆ ಚುನಾವಣೆಗೆ ಕೆಲವೇ ವಾರಗಳು ಬಾಕಿ ಇರುವಾಗ ಆಡಳಿತಾರೂಢ ಭಾರತೀಯ ಜನತಾ ಪಕ್ಷ ಹರಿಯಾಣ ಮುಖ್ಯಮಂತ್ರಿಯನ್ನು ಬದಲಾಯಿಸಿರುವುದು ಅಚ್ಚರಿ ಮೂಡಿಸಿದೆ. ಅಕ್ಟೋಬರ್‌ನಲ್ಲಿ ಹರಿಯಾಣ ವಿಧಾನಸಭೆ ಚುನಾವಣೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



