CAAಗೆ ತಮಿಳು ನಟ ವಿಜಯ್ ವಿರೋಧ; ತಮಿಳುನಾಡಿನಲ್ಲಿ ಜಾರಿಗೊಳಿಸದಂತೆ ಸರ್ಕಾರಕ್ಕೆ ಒತ್ತಾಯ
ಇತ್ತೀಚೆಗೆ ತಮ್ಮ ರಾಜಕೀಯ ಪಕ್ಷ 'ತಮಿಳಗ ವೆಟ್ರಿ ಕಳಗಂ' ಅನ್ನು ಪ್ರಾರಂಭಿಸಿದ ತಮಿಳು ನಟ ವಿಜಯ್ ಅವರು ಮಂಗಳವಾರ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು 'ವಿಭಜಕ' ಎಂದು ಕರೆದಿದ್ದಾರೆ ಮತ್ತು ಇದು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.

ಚೆನ್ನೈ: ಇತ್ತೀಚೆಗೆ ತಮ್ಮ ರಾಜಕೀಯ ಪಕ್ಷ 'ತಮಿಳಗ ವೆಟ್ರಿ ಕಳಗಂ' ಅನ್ನು ಪ್ರಾರಂಭಿಸಿದ ತಮಿಳು ನಟ ವಿಜಯ್ ಅವರು ಮಂಗಳವಾರ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು 'ವಿಭಜಕ' ಎಂದು ಕರೆದಿದ್ದಾರೆ ಮತ್ತು ಇದು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.
ತಮಿಳುನಾಡಿನಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು (ಸಿಎಎ) ಜಾರಿಗೊಳಿಸುವುದಿಲ್ಲ ಎಂದು ಡಿಎಂಕೆ ಸರ್ಕಾರವು ಜನರಿಗೆ ಭರವಸೆ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.
ಸಿಎಎ ಅನ್ನು ಜಾರಿಗೊಳಿಸಲು ಕೇಂದ್ರವು ನಿನ್ನೆ ಅಧಿಸೂಚನೆಯನ್ನು ಹೊರಡಿಸಿತ್ತು.
ಈ ಕುರಿತು ಪಕ್ಷದ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪೋಸ್ಟ್ ಮಾಡಿದ್ದು, 'ವಿಭಜಕ ರಾಜಕೀಯ' ಅನುಸರಿಸಿ ಜಾರಿಗೆ ತರುತ್ತಿರುವ ಸಿಎಎಯಂತಹ ಯಾವುದೇ ಕಾನೂನು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.
ನಟ ವಿಜಯ್ ಅವರ ಪಕ್ಷ ತಮಿಳಗ ವೆಟ್ರಿ ಕಳಗಂ 2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ತೀರ್ಮಾನಿಸಿದೆ. ಏಕೆಂದರೆ 2026ರ ವಿಧಾನಸಭಾ ಚುನಾವಣೆಯು ಅವರ ಗುರಿಯಾಗಿದೆ ಎಂದು ಅವರು ಈ ಮೊದಲೇ ಘೋಷಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



