ದೇಶ

ಶಾಸಕ ಸ್ಥಾನಕ್ಕೆ ಖಟ್ಟರ್ ರಾಜೀನಾಮೆ; ಸಿಎಂ ಸೈನಿ ಕ್ಷೇತ್ರ ನೋಡಿಕೊಳ್ಳುತ್ತಾರೆ ಎಂದ ಹರಿಯಾಣ ಮಾಜಿ ಸಿಎಂ

ಹರಿಯಾಣ ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಬುಧವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಶಾಸಕ ಸ್ಥಾನಕ್ಕೆ ಖಟ್ಟರ್ ರಾಜೀನಾಮೆ; ಸಿಎಂ ಸೈನಿ ಕ್ಷೇತ್ರ ನೋಡಿಕೊಳ್ಳುತ್ತಾರೆ ಎಂದ ಹರಿಯಾಣ ಮಾಜಿ ಸಿಎಂ
ಮನೋಹರ್ ಲಾಲ್ ಖಟ್ಟರ್
Published On :

ಚಂಡೀಗಢ: ಹರಿಯಾಣ ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂಬ ಊಹಾಪೋಹಗಳ ನಡುವೆ ಬುಧವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಕರ್ನಾಲ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಖಟ್ಟರ್ ಅವರು ಹೊಸದಾಗಿ ನೇಮಕಗೊಂಡ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ತಮ್ಮ ಕ್ಷೇತ್ರವನ್ನು ನೋಡಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ನಯಾಬ್ ಸಿಂಗ್ ಸೈನಿ ಸರ್ಕಾರ ಇಂದು ವಿಧಾನಸಭೆಯಲ್ಲಿ ವಿಶ್ವಾಸಮತ ಗೆದ್ದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಈ ಘೋಷಣೆ ಮಾಡಿದ್ದಾರೆ.

ಖಟ್ಟರ್ ಅವರು ಮಂಗಳವಾರ ಹರಿಯಾಣ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ಸೈನಿ ನೂತನ ಸಿಎಂ ಆಗಿ ಅಧಿಕಾರ ವಹಿಸಿಕೊಂಡರು.

ಪ್ರಸ್ತುತ ಸಂಸದರಾಗಿರುವ ನಯಾಬ್ ಸಿಂಗ್ ಸೈನಿ ಅವರು ಖಟ್ಟರ್ ರಾಜೀನಾಮೆಯಿಂದ ತೆರವಾಗುವ ಕರ್ನಾಲ್ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.