ದೇಶ

ದೆಹಲಿ: ಶಾಸ್ತ್ರಿನಗರದ ವಸತಿ ಕಟ್ಟಡಕ್ಕೆ ಬೆಂಕಿ ತಗುಲಿ ಘೋರ ದುರಂತ; ಇಬ್ಬರು ಮಕ್ಕಳು ಸೇರಿ ನಾಲ್ವರ ದುರ್ಮರಣ

ಶಾಸ್ತ್ರಿನಗರದ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.

ದೆಹಲಿ: ಶಾಸ್ತ್ರಿನಗರದ ವಸತಿ ಕಟ್ಟಡಕ್ಕೆ ಬೆಂಕಿ ತಗುಲಿ ಘೋರ ದುರಂತ; ಇಬ್ಬರು ಮಕ್ಕಳು ಸೇರಿ ನಾಲ್ವರ ದುರ್ಮರಣ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಶಾಸ್ತ್ರಿನಗರದ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.

ಗುರುವಾರ ಮುಂಜಾನೆ ದೆಹಲಿಯ ಶಾಸ್ತ್ರಿ ನಗರ ಪ್ರದೇಶದಲ್ಲಿರುವ ವಸತಿ ಕಟ್ಟಡದಲ್ಲಿ ಸಂಭವಿಸಿದ ಬೃಹತ್ ಬೆಂಕಿಯ ನಂತರ ಉಸಿರುಗಟ್ಟಿ ಇಬ್ಬರು ಮಕ್ಕಳು ಮತ್ತು ದಂಪತಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಮನೋಜ್(30) ಮತ್ತು ಅವರ ಪತ್ನಿ ಸುಮನ್(28) ಎಂದು ಗುರುತಿಸಲಾಗಿದೆ, ಜೊತೆಗೆ ಐದು ಮತ್ತು ಮೂರು ವರ್ಷದ ಇಬ್ಬರು ಹೆಣ್ಣುಮಕ್ಕಳು ಮೃತಪಟ್ಟಿದ್ದಾರೆ. ಉಸಿರುಗಟ್ಟುವಿಕೆಯಿಂದ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ನಮಗೆ ಆಸ್ಪತ್ರೆಯಿಂದ ಮಾಹಿತಿ ಸಿಕ್ಕಿತು. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶಹದಾರದ ಶಾಸ್ತ್ರಿ ನಗರ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿರುವ ಬಗ್ಗೆ ಬೆಳಗ್ಗೆ 5:20ರ ಸುಮಾರಿಗೆ ಪೊಲೀಸರಿಗೆ ಕರೆ ಬಂದಿದೆ. ಕೂಡಲೇ ದೆಹಲಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದೆ. ಅಗ್ನಿ ಅವಘಡ ಸಂಭವಿಸಿದ ಕಟ್ಟಡವು ನಾಲ್ಕು ಮಹಡಿಗಳನ್ನು ಹೊಂದಿದ್ದು, ನೆಲ ಮಹಡಿಯಲ್ಲಿ ಕಾರ್-ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಬೆಂಕಿ, ಹೊಗೆ ತ್ವರಿತವಾಗಿ ಇಡೀ ಕಟ್ಟಡದಾದ್ಯಂತ ಹರಡಿದೆ.

ರಸ್ತೆ ಕಿರಿದಾಗಿದ್ದರೂ, ಅಗ್ನಿಶಾಮಕ ಅಧಿಕಾರಿಗಳು ಸ್ಥಳಕ್ಕೆ ತಲುಪಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರತಿ ಮಹಡಿಯಲ್ಲಿ ಹುಡುಕಾಟ ನಡೆಸಲಾಯಿತು. ಮೂವರು ಪುರುಷರು, ನಾಲ್ವರು ಮಹಿಳೆಯರು ಮತ್ತು ಇಬ್ಬರು ಮಕ್ಕಳನ್ನು ಹೆಡ್ಗೆವಾರ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.