ಒಂದು ರಾಷ್ಟ್ರ, ಒಂದು ಚುನಾವಣೆ: ಕೋವಿಂದ್ ಸಮಿತಿಯಿಂದ ರಾಷ್ಟ್ರಪತಿಗಳಿಗೆ ವರದಿ ಸಲ್ಲಿಕೆ
ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತಂತೆ ರಚನೆಯಾಗಿದ್ದ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಮಿತಿಯು 'ಒಂದು ರಾಷ್ಟ್ರ, ಒಂದು ಚುನಾವಣೆ' ಕುರಿತ ತನ್ನ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದೆ.

ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತಂತೆ ರಚನೆಯಾಗಿದ್ದ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಸಮಿತಿಯು 'ಒಂದು ರಾಷ್ಟ್ರ, ಒಂದು ಚುನಾವಣೆ' ಕುರಿತ ತನ್ನ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದೆ.
ದೇಶದಲ್ಲಿ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸಲು ಸಂವಿಧಾನದ ಕೊನೆಯ ಐದು ವಿಧಿಗಳಲ್ಲಿ ತಿದ್ದುಪಡಿ ಮಾಡಲು ಸಮಿತಿಯು ಶಿಫಾರಸು ಮಾಡಬಹುದು ಎಂದು ವರದಿಗಳು ಹೇಳುತ್ತಿವೆ. ಪ್ರಸ್ತಾವಿತ ವರದಿಯು ಲೋಕಸಭೆ, ರಾಜ್ಯ ವಿಧಾನಸಭೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸಲು ಏಕ ಮತದಾರರ ಪಟ್ಟಿಯನ್ನು ಹೊಂದಲು ಕೇಂದ್ರೀಕರಿಸುತ್ತದೆ ಎಂದು ಹೇಳಲಾಗುತ್ತಿದೆ.
ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ರಚಿಸಲಾದ ಸಮಿತಿಯು ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಅಸ್ತಿತ್ವದಲ್ಲಿರುವ ಸಾಂವಿಧಾನಿಕ ಚೌಕಟ್ಟನ್ನು ಗಮನದಲ್ಲಿಟ್ಟುಕೊಂಡು ಏಕಕಾಲದಲ್ಲಿ ಚುನಾವಣೆಗಳನ್ನು ಪರಿಶೀಲಿಸುವ ಮತ್ತು ಶಿಫಾರಸು ಮಾಡುವ ಜವಾಬ್ದಾರಿಯನ್ನು ವಹಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



