ಲೋಕಸಭೆ ಚುನಾವಣೆ: ಪಂಜಾಬ್ ಮಾಜಿ ಸಿಎಂ ಅಮರೀಂದರ್ ಸಿಂಗ್ ಪತ್ನಿ ಬಿಜೆಪಿ ಸೇರ್ಪಡೆ
ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಪತ್ನಿ ಪ್ರಣೀತ್ ಕೌರ್ ಅವರು ಭಾರತೀಯ ಜನತಾ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.

ಅಮೃತಸರ: ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಪತ್ನಿ ಪ್ರಣೀತ್ ಕೌರ್ ಅವರು ಭಾರತೀಯ ಜನತಾ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.
ಗುರುವಾರ ದೆಹಲಿಯಲ್ಲಿ ನಡೆದ ಔಪಚಾರಿಕ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಪತ್ನಿ ಪ್ರಣೀತ್ ಕೌರ್ ಅವರು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾದರು.
ಮೂಲಗಳ ಪ್ರಕಾರ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಣೀತ್ ಕೌರ್ ಅವರು ಪಟಿಯಾಲ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಕೇಸರಿ ಪಕ್ಷಕ್ಕೆ ಸೇರ್ಪಡೆಯಾದ ನಂತರ ಮಾತನಾಡಿದ ಅವರು, “ನಾನು ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ನನ್ನ ಕ್ಷೇತ್ರ, ನನ್ನ ರಾಜ್ಯ ಮತ್ತು ದೇಶಕ್ಕಾಗಿ ಕೆಲಸ ಮಾಡುತ್ತೇನೆ. ನಾನು ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲೂ ಉತ್ತಮ ಕೆಲಸ ಮಾಡಿದ್ದೆ. ಅದೇ ರೀತಿಯ ಉತ್ತಮ ಕೆಲಸವನ್ನು ಬಿಜೆಪಿಯೊಂದಿಗೂ ಮಾಡುತ್ತೇನೆ ಎಂದರು.
ಅಂತೆಯೇ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಕೌರ್, "ಅದು ಬಿಜೆಪಿ ನಾಯಕರ ನಿರ್ಧಾರವನ್ನು ಅವಲಂಬಿಸಿರುತ್ತದೆ. ಪ್ರಸುತ್ತ ಪಕ್ಷದ ಪರ ಕೆಲಸಕ್ಕಾಗಿ ನಾನು ಇಲ್ಲಿಗೆ ಬಂದಿದ್ದೇನೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



