ಪಶ್ಚಿಮ ಬಂಗಾಳ: ಟಿಎಂಸಿಯ ಇಬ್ಬರು ಹಾಲಿ ಸಂಸದರು ಬಿಜೆಪಿ ಸೇರ್ಪಡೆ
ತೃಣಮೂಲ ಕಾಂಗ್ರೆಸ್‌ನ ಇಬ್ಬರು ಹಾಲಿ ಸಂಸದರು ಶುಕ್ರವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಕೋಲ್ಕತಾ: ಲೋಕಸಭೆ ಚುನಾವಣೆಗೂ ಮುನ್ನ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ತೀವ್ರ ಹಿನ್ನೆಡೆಯಾಗಿದ್ದು, ತೃಣಮೂಲ ಕಾಂಗ್ರೆಸ್‌ನ ಇಬ್ಬರು ಹಾಲಿ ಸಂಸದರು ಶುಕ್ರವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಬರಾಕ್‌ಪುರ ಸಂಸದ ಅರ್ಜುನ್ ಸಿಂಗ್ ಮತ್ತು ತಮ್ಲುಕ್ ಸಂಸದ ದಿಬ್ಯೇಂದು ಅಧಿಕಾರಿ ಅವರಿಗೆ ಈ ಬಾರಿ ಟಿಎಂಸಿ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಸೇರಿದ್ದಾರೆ.
ಲೋಕಸಭೆ ಚುನಾವಣೆಗೆ ಟಿಎಂಸಿಯ ಅಭ್ಯರ್ಥಿಗಳ ಪಟ್ಟಿಯಿಂದ ಕೈಬಿಟ್ಟ ಕೆಲವೇ ದಿನಗಳಲ್ಲಿ ಟಿಎಂಸಿ ತೊರೆಯುವುದಾಗಿ ಅರ್ಜುನ್ ಸಿಂಗ್ ಘೋಷಿಸಿದ್ದರು.
ಬಿಜೆಪಿ ನಾಯಕ ಸುವೇಂದು ಅಧಿಕಾರಿಯ ಸಹೋದರ, ತಾಮ್ಲುಕ್ ಅಧಿಕಾರಿ ಅವರು ಇಂದು ಬಿಜೆಪಿಗೆ ಸೇರ್ಪಡೆಗೊಂಡರು.
ಬಿಜೆಪಿ ನಾಯಕರಾದ ದುಷ್ಯಂತ್ ಗೌತಮ್ ಮತ್ತು ಅಮಿತ್ ಮಾಳವೀಯ ಸಮ್ಮುಖದಲ್ಲಿ ಈ ಇಬ್ಬರು ಸಂಸದರು ಬಿಜೆಪಿಗೆ ಸೇರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



