ದೇಶ

ಶ್ರೀರಾಮುಲು ಸೋದರಿ ಜೆ ಶಾಂತಾಗೆ YSRCP ಟಿಕೆಟ್: ಆಂಧ್ರದ ಹಿಂದೂಪುರ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ!

ಲೋಕಸಭೆ ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ YSRCP ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗೆ ಟಿಕೆಟ್ ಘೋಷಣೆ ಮಾಡಿದ್ದು ಮಾಜಿ ಸಚಿವ ಬಿ ಶ್ರೀರಾಮುಲು ಸಹೋದರಿಗೆ YSRCP ಪಕ್ಷದಿಂದ ಸ್ಪರ್ಧಿಸುತ್ತಿದ್ದಾರೆ.

ಶ್ರೀರಾಮುಲು ಸೋದರಿ ಜೆ ಶಾಂತಾಗೆ YSRCP ಟಿಕೆಟ್: ಆಂಧ್ರದ ಹಿಂದೂಪುರ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ!
ಜೆ ಶಾಂತಾ-ಜಗನ್ ಮೋಹನ್ ರೆಡ್ಡಿ
Published On :

ವಿಜಯವಾಡ: ಲೋಕಸಭೆ ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ YSRCP ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗೆ ಟಿಕೆಟ್ ಘೋಷಣೆ ಮಾಡಿದ್ದು ಮಾಜಿ ಸಚಿವ ಬಿ ಶ್ರೀರಾಮುಲು ಸಹೋದರಿಗೆ YSRCP ಪಕ್ಷದಿಂದ ಸ್ಪರ್ಧಿಸುತ್ತಿದ್ದಾರೆ.

ಜೆ ಶಾಂತಾ ಅವರು ಹಿಂದೂಪರ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಜೆ ಶಾಂತಾ ಅವರು 2009ರಲ್ಲಿ ಬಳ್ಳಾರಿ ಲೋಕಸಭೆಯಲ್ಲಿ ಗೆಲುವು ಸಾಧಿಸಿದ್ದರು. ಇತ್ತೀಚೆಗಷ್ಟೇ ಬಿಜೆಪಿ ತೊರೆದು YSRCP ಪಕ್ಷ ಸೇರ್ಪಡೆಗೊಂಡಿದ್ದರು. ಮೇ 13ರಂದು ಆಂಧ್ರಪ್ರದೇಶದಲ್ಲಿ ಲೋಕಸಭೆ ಚುನಾವಣೆಯ ಮತದಾನ ನಡೆಯಲಿದೆ.

ಇಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ತಮ್ಮ ತಂದೆ ವೈ.ಎಸ್ ರಾಜಶೇಖರ ರೆಡ್ಡಿ ಸಮಾಧಿ ಬಳಿ 175 ವಿಧಾನಸಭೆ ಹಾಗೂ 24 ಲೋಕಸಭೆ ಚುನಾವಣೆಯ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.