ಮಾಜಿ ಸಿಎಂ ಕಮಲ್ ನಾಥ್ ಆಪ್ತ ಸೇರಿದಂತೆ ಮಧ್ಯ ಪ್ರದೇಶ ಕಾಂಗ್ರೆಸ್ ಹಲವು ನಾಯಕರು ಬಿಜೆಪಿ ಸೇರ್ಪಡೆ
ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರ ನಿಕಟವರ್ತಿ ಮತ್ತು ಪ್ರತಿಪಕ್ಷ ಕಾಂಗ್ರೆಸ್‌ನ ಇತರ ಕೆಲವು ನಾಯಕರು ಸೋಮವಾರ ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಭೋಪಾಲ್: ಲೋಕಸಭೆ ಚುನಾವಣೆಗೆ ಮುನ್ನ, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರ ನಿಕಟವರ್ತಿ ಮತ್ತು ಪ್ರತಿಪಕ್ಷ ಕಾಂಗ್ರೆಸ್‌ನ ಇತರ ಕೆಲವು ನಾಯಕರು ಸೋಮವಾರ ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಬಹುಜನ ಸಮಾಜ ಪಕ್ಷದ ರಾಜ್ಯ ಉಸ್ತುವಾರಿ ಸಹ ಇಂದು ಭಾರತೀಯ ಜನತಾ ಪಕ್ಷಕ್ಕೆ(ಬಿಜೆಪಿ) ಸೇರ್ಪಡೆಗೊಂಡರು. ಮಾಜಿ ಕಾಂಗ್ರೆಸ್ ವಕ್ತಾರರಾಗಿದ್ದ ಸೈಯದ್ ಜಾಫರ್ ಅವರು ಮುಖ್ಯಮಂತ್ರಿ ಮೋಹನ್ ಯಾದವ್ ಮತ್ತು ಪಕ್ಷದ ರಾಜ್ಯಾಧ್ಯಕ್ಷ ವಿಡಿ ಶರ್ಮಾ ಅವರ ಸಮ್ಮುಖದಲ್ಲಿ ಇಂದು ಭೋಪಾಲ್‌ನಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.
ಕಾಂಗ್ರೆಸ್ ಹಿರಿಯ ನಾಯಕ ಛಿಂದ್ವಾರಾ ಮೂಲದ ಜಾಫರ್ ಅವರು ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರ ಆಪ್ತರಪ ಎಂದು ಪರಿಗಣಿಸಲಾಗಿತ್ತು. X ನಲ್ಲಿನ ಅವರ ಪ್ರೊಫೈಲ್ ಪ್ರಕಾರ, ಜಾಫರ್ ಅವರು ಪ್ರಸ್ತುತ ಮಧ್ಯ ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಹೊಂದಿದ್ದರು. ಆದರೆ, ಜಾಫರ್ ಸದ್ಯ ಪಕ್ಷದಲ್ಲಿ ಯಾವುದೇ ಹುದ್ದೆಯನ್ನು ಹೊಂದಿಲ್ಲ ಎಂದು ರಾಜ್ಯ ಕಾಂಗ್ರೆಸ್ ಮಾಧ್ಯಮ ವಿಭಾಗದ ಅಧ್ಯಕ್ಷ ಕೆ ಕೆ ಮಿಶ್ರಾ ಹೇಳಿದ್ದಾರೆ.
ಈ ತಿಂಗಳ ಆರಂಭದಲ್ಲಿ, ಕಮಲ್ ನಾಥ್ ಅವರು ಬಿಜೆಪಿ ಸೇರುತ್ತಾರೆ ಎಂಬ ಊಹಾಪೋಹಗಳು ಇದ್ದವು. ಆದರೆ ಅವರು ಇದು "ಮಾಧ್ಯಮಗಳ ಸೃಷ್ಟಿ" ಎಂದು ಹೇಳಿ, ವರದಿಗಳನ್ನು ನಿರಾಕರಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



