ಪತಂಜಲಿ ಜಾಹೀರಾತು: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಯೋಗ ಗುರು ರಾಮ್‌ದೇವ್‌ಗೆ ಸುಪ್ರೀಂ ಕೋರ್ಟ್ ಸಮನ್ಸ್
ಪತಂಜಲಿ ಕಂಪನಿಯ ಉತ್ಪನ್ನಗಳ ಜಾಹೀರಾತು ಮತ್ತು ಔಷಧೀಯ ಪರಿಣಾಮಕಾರಿತ್ವಕ್ಕೆ ಸಂಬಂಧಿಸಿದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಯೋಗ ಗುರು ರಾಮ್‌ದೇವ್ ಮತ್ತು ಪತಂಜಲಿ ಆಯುರ್ವೇದ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರ ಖುದ್ದು ಹಾಜರಾತಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಸಮನ್ಸ್ ನೀಡಿದೆ.

ನವದೆಹಲಿ: ಪತಂಜಲಿ ಕಂಪನಿಯ ಉತ್ಪನ್ನಗಳ ಜಾಹೀರಾತು ಮತ್ತು ಔಷಧೀಯ ಪರಿಣಾಮಕಾರಿತ್ವಕ್ಕೆ ಸಂಬಂಧಿಸಿದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಯೋಗ ಗುರು ರಾಮ್‌ದೇವ್ ಮತ್ತು ಪತಂಜಲಿ ಆಯುರ್ವೇದ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರ ಖುದ್ದು ಹಾಜರಾತಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಸಮನ್ಸ್ ನೀಡಿದೆ.
ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರನ್ನೊಳಗೊಂಡ ನ್ಯಾಯಪೀಠ, ಈ ಹಿಂದೆ ನೀಡಲಾದ ನೋಟಿಸ್ ಗೆ ಪ್ರತಿಕ್ರಿಯೆ ನೀಡದ ಕಂಪನಿ ಮತ್ತು ಬಾಲಕೃಷ್ಣ ಅವರ ನಡೆಯನ್ನು ತೀವ್ರವಾಗಿ ಖಂಡಿಸಿತು.
ನ್ಯಾಯಾಲಯಕ್ಕೆ ನೀಡಿದ ಭರವಸೆಯನ್ನು ಮೇಲ್ನೋಟಕ್ಕೆ ಉಲ್ಲಂಘಿಸಿದ್ದಕ್ಕಾಗಿ ಅವರ ವಿರುದ್ಧ ಏಕೆ ನ್ಯಾಯಾಂಗ ನಿಂದನೆ ಮೊಕದ್ದಮೆ ಪ್ರಾರಂಭಿಸಬಾರದು ಎಂಬುದಕ್ಕೆ ಪ್ರತಿಕ್ರಿಯೆ ನೀಡುವಂತೆ ಅವರಿಗೆ ಸೂಚನೆ ನೀಡಿತ್ತು. ರಾಮ್‌ದೇವ್ ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಏಕೆ ಪ್ರಾರಂಭಿಸಬಾರದು ಎಂಬ ಕಾರಣವನ್ನು ತಿಳಿಸಲು ನ್ಯಾಯಪೀಠ ನೋಟಿಸ್ ಜಾರಿಗೊಳಿಸಿತು.
ರಾಮ್‌ದೇವ್ ಅವರು ಲಸಿಕೆ ಅಭಿಯಾನ ಮತ್ತು ಆಧುನಿಕ ಔಷಧಗಳ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



