ಸದ್ಗುರು ಜಗ್ಗಿ ವಾಸುದೇವ್ ಗೆ ತಲೆಯಲ್ಲಿ ರಕ್ತಸ್ರಾವ; ತುರ್ತು ಬ್ರೇನ್ ಸರ್ಜರಿ
ಸದ್ಗುರು ಜಗ್ಗಿ ವಾಸುದೇವ್ ಅವರು ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಬುಧವಾರ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

ನವದೆಹಲಿ: ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅವರು ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಬುಧವಾರ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.
ತಲೆಯಲ್ಲಿ ರಕ್ತಸ್ರಾವ ತಡೆಯಲು ಮಾರ್ಚ್ 17 ರಂದು ಶಸ್ತ್ರಚಿಕಿತ್ಸೆ ನಡೆಸಲಾಯಿತು. ಶಸ್ತ್ರಚಿಕಿತ್ಸೆಯ ನಂತರ ಸದ್ಗುರು ವೆಂಟಿಲೇಟರ್‌ನಿಂದ ಹೊರ ಬಂದಿದ್ದಾರೆ. ಅವರ ಮೆದುಳು, ದೇಹ ಮತ್ತು ಪ್ರಮುಖ ಅಂಗಗಳು ಚೇತರಿಸಿಕೊಳ್ಳುತ್ತಿವೆ ಎಂದು ಇಂದ್ರಪ್ರಸ್ಥದ ಅಪೋಲೋ ಆಸ್ಪತ್ರೆ ತಿಳಿಸಿದೆ.
66 ವರ್ಷದ ಆಧ್ಯಾತ್ಮಿಕ ಗುರು, ಇಶಾ ಫೌಂಡೇಶನ್‌ನ ಸಂಸ್ಥಾಪ ಸದ್ಗುರು ಜಗ್ಗಿ ವಾಸುದೇವ್ ಅವರು ಪರಿಸರ ಸಂರಕ್ಷಣೆಗಾಗಿ 'ಮಣ್ಣು ಉಳಿಸಿ' ಮತ್ತು 'ನದಿಗಳನ್ನು ಉಳಿಸಿ' ಸೇರಿದಂತೆ ಹಲವು ಅಭಿಯಾನಗಳನ್ನು ಕೈಗೊಂಡಿದ್ದರು.
ಕಳೆದ ನಾಲ್ಕು ವಾರಗಳಿಂದ ತೀವ್ರ ತಲೆನೋವಿನಿಂದ ಬಳಲುತ್ತಿದ್ದ ಸದ್ಗುರು ಜಗ್ಗಿ ವಾಸುದೇವ್ ಅವರು, ತೀವ್ರ ನೋವಿನ ಹೊರತಾಗಿಯೂ, ಅವರು ತಮ್ಮ ಸಾಮಾನ್ಯ ದೈನಂದಿನ ಸಾಮಾಜಿಕ ಚಟುವಟಿಕೆಗಳನ್ನು ಮುಂದುವರೆಸಿದ್ದರು ಮತ್ತು ಮಾರ್ಚ್ 8 ರಂದು ಮಹಾ ಶಿವರಾತ್ರಿ ಕಾರ್ಯಕ್ರಮವನ್ನು ಸಹ ನಡೆಸಿಕೊಟ್ಟಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮಾರ್ಚ್ 15 ರ ಹೊತ್ತಿಗೆ ತಲೆನೋವು ತೀವ್ರವಾದ ನಂತರ ಅವರು ಆಸ್ಪತ್ರೆಯ ಹಿರಿಯ ಸಲಹೆಗಾರ ನರರೋಗ ತಜ್ಞ ಡಾ ವಿನಿತ್ ಸೂರಿ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ್ದಾರೆ. ಸೂರಿ ಅವರು ತಕ್ಷಣವೇ ಎಂಆರ್ ಐ ಮಾಡಿಸುವಂತೆ ಸಲಹೆ ನೀಡಿದ್ದಾರೆ. ಎಂಆರ್ ಐನಲ್ಲಿ ತಲೆಯಲ್ಲಿ ರಕ್ತಸ್ರಾವ ಆಗುತ್ತಿರುವುದು ಕಂಡುಬಂದಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



